ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಹಾಗೂ ಹಾಸನ ಜಿಲ್ಲೆಗೆ ಇಂದು ಮತ್ತು ನಾಳೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ತೀರದಲ್ಲಿ ಗಾಳಿಯ ವೇಗವು ಸದ್ಯ ಪ್ರತಿ ಗಂಟೆಗೆ 40 ಕಿ.ಮೀ.ನಿಂದ 50 ಕಿ.ಮೀ. ಇದೆ. ಈ ವೇಗವು 48 ಗಂಟೆಗಳ ಅವಧಿಯಲ್ಲಿ 60 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.