Home ಕರಾವಳಿ ಮುಂದಿನ ನಾಲ್ಕು ದಿನ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

ಮುಂದಿನ ನಾಲ್ಕು ದಿನ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

►► ರಾಜ್ಯಾದ್ಯಂತ ಒಟ್ಟು 18 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್

ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ(ಜೂನ್ 25ರವರೆಗೆ) ರಾಜ್ಯದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಈ ನಿಟ್ಟಿನಲ್ಲಿ ರಾಜ್ಯದ 18 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆಯಿದೆ. ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸೇರಿದಂತೆ ಉಡುಪಿ, ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡಿನ ವಿಜಯಪುರ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Join Whatsapp
Exit mobile version