Home ಕರಾವಳಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

ಮಂಗಳೂರು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.


ಜೂನ್ 6ರಿಂದ 11ರ ವರೆಗೆ ಭಾರೀ ಮಳೆಯಾಗಲಿದೆ. ಸಮುದ್ರದಲ್ಲಿ ಅಬ್ಬರ ಹೆಚ್ಚಾಗಲಿದ್ದು ತೀರ ಪ್ರದೇಶದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ದ.ಕ. ಜಿಲ್ಲಾಡಳಿತ ಸೂಚನೆ ನೀಡಿದೆ.


ಜೂನ್ 10ರ ವೇಳೆಗೆ ಕೇರಳಕ್ಕೆ ಮುಂಗಾರು ಆಗಮಿಸುವ ಸಾಧ್ಯತೆಯಿದ್ದು ಆನಂತರವಷ್ಟೇ ರಾಜ್ಯದ ಕರಾವಳಿಗೆ ಮುಂಗಾರು ಪ್ರವೇಶಿಸಲಿದೆ.

ದ.ಕ. ಜಿಲ್ಲಾಡಳಿತ ಸಾರ್ವಜನಿಕರಿಗೆ ಸೂಚನೆ ನೀಡಿದೆ

1.ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವುದು.

  1. ಮೀನುಗಾರರಿಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
  2. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು.
  3. ಪ್ರವಾಸಿಗರು/ ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಎಚ್ಚರಿಕೆವಹಿಸುವುದು.
Join Whatsapp
Exit mobile version