ರಾಜ್ಯದಲ್ಲಿ ನಾಳೆ ಭಾರಿ ಗಾಳಿ-ಮಳೆ ಮುಂದುವರಿಯುವ ಸಾಧ್ಯತೆ

Prasthutha|

ಬೆಂಗಳೂರು: ರಾಜ್ಯದ ಕೆಲವೆಡೆ ಶುಕ್ರವಾರ ಭಾರಿ ಗಾಳಿ-ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಿದೆ.

- Advertisement -

ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಂಭವವಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

- Advertisement -

ಇದೇ 8ರವರೆಗೂ ಕರಾವಳಿ, ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆ ಮುಂದುವರಿಯುವ ಸಂಭವವಿದೆ ಎಂದು ಇಲಾಖೆ ಹೇಳಿದೆ.

Join Whatsapp