ಭಾರಿ ಪ್ರಮಾಣದ ಗಾಳಿ ಮಳೆ; ಕಳಸ ತಾಲೂಕಿನ ಶಾಲೆಗಳಿಗೆ ರಜೆ

Prasthutha|

ಮೂಡಿಗೆರೆ : ಮಲೆನಾಡಿನಾಡಿನಲ್ಲಿ ಬೀಕರ ಗಾಳಿ ಮಳೆಯಾಗಿರುವ ಕಾರಣ ಕಳಸ ತಾಲೂಕಿನ ಶಾಲೆಗಳಿಗೆ ರಜೆ ಬುಧವಾರ ರಜೆ ಘೋಷಿಸಿ ಬಿಇಓ ಆದೇಶ ಹೊರಡಿಸಿದ್ದಾರೆ.

- Advertisement -


ಕಳೆದ ಕೆಲವು ದಿನಗಳಿಂದ ತಾಲೂಕಿನಾದ್ಯಂತ ಮಳೆ ಆರ್ಭಟ ಜೋರಾಗಿದ್ದು, ಹಲವು ಪ್ರಾಕೃತಿಕ ದುರಂತಗಳ ಸಹಿತ ಅನೇಕ ಸಾವು ನೋವುಗಳು ಸಂಭವಿಸಿವೆ.

ಮಂಗಳವಾರದಿಂದ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಭಾರಿ ಪ್ರಮಾಣದಲ್ಲಿ ಗಾಳಿ ಬೀಸುತ್ತಿದ್ದು ಶಾಲಾ ಮಕ್ಕಳಿಗೆ ರಜೆ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

- Advertisement -

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 1ರಿಂದ 10ನೇ ತರಗತಿಯ ಶಾಲೆಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ.
ಇಂದಿನ ಪರಿಸ್ಥಿತಿ ನೋಡಿಕೊಂಡು ನಾಳೆ ರಜೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp