ಹೆಬ್ರಿ | ಬಸ್ ಗೆ ಕಾರು ಡಿಕ್ಕಿ: ಇಬ್ಬರು ಮೃತ್ಯು

Prasthutha|

- Advertisement -

ಹೆಬ್ರಿ: ಬಸ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ಸೀತಾನದಿ ಜಕ್ಕನಮಕ್ಕಿ ಬಳಿ ನಡೆದಿದೆ.

ಮೃತರನ್ನು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮಶೇಖರ್ ಎಂದು ಗುರುತಿಸಲಾಗಿದೆ.

- Advertisement -

ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಹೆಬ್ರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Join Whatsapp