Home ಟಾಪ್ ಸುದ್ದಿಗಳು ಹೆಬ್ರಿ | ಬಸ್ ಗೆ ಕಾರು ಡಿಕ್ಕಿ: ಇಬ್ಬರು ಮೃತ್ಯು

ಹೆಬ್ರಿ | ಬಸ್ ಗೆ ಕಾರು ಡಿಕ್ಕಿ: ಇಬ್ಬರು ಮೃತ್ಯು

ಹೆಬ್ರಿ: ಬಸ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ಸೀತಾನದಿ ಜಕ್ಕನಮಕ್ಕಿ ಬಳಿ ನಡೆದಿದೆ.

ಮೃತರನ್ನು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮಶೇಖರ್ ಎಂದು ಗುರುತಿಸಲಾಗಿದೆ.

ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಹೆಬ್ರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version