ಕೇದಾರನಾಥ ಯಾತ್ರಿಕರಿದ್ದ ಹೆಲಿಕಾಪ್ಟರ್ ಪತನ: ಆರು ಮಂದಿ ಸಾವು

Prasthutha|

ಉತ್ತರಾಖಂಡ: ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಕೇದಾರನಾಥ ಬಳಿ ಇಂದು ಪತನಗೊಂಡ ಪರಿಣಾಮ ಪೈಲಟ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಗಾರು ಚಟ್ಟಿ ಬಳಿ ಹೆಲಿಕಾಪ್ಟರ್ ಪತನಗೊಂಡಿದ್ದು, ಈವರೆಗೆ ಆರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇದಾರನಾಥದಿಂದ ಟೇಕಾಫ್ ಆದ ಕೂಡಲೇ ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

https://twitter.com/ANI/status/1582262625114546177
Join Whatsapp