Home ಟಾಪ್ ಸುದ್ದಿಗಳು ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್ ಪತನ

ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್ ಪತನ

ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ಶುಕ್ರವಾರ ನಡೆದಿದೆ.


ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ವಾಲಿದ ಪರಿಣಾಮ ಇಬ್ಬರು ಪೈಲಟ್ ಗಳು ಗಾಯಗೊಂಡಿದ್ದಾರೆ.


ಘಟನೆ ಸಂಭವಿಸಿದಾಗ ಚಾಪರ್ ಶಿವಸೇನೆಯ ಶಿಂಧೆ ಬಣದ (ಯುಬಿಟಿ) ನಾಯಕಿ ಸುಷ್ಮಾ ಅಂಧಾರೆಯನ್ನು ಚುನಾವಣಾ ಪ್ರಚಾರಕ್ಕೆ ಕರೆದೊಯ್ಯಲು ಹೋಗುತ್ತಿತ್ತು.


ಬೆಳಗ್ಗೆ 9.30ರ ಸುಮಾರಿಗೆ ಹೆಲಿಕಾಪ್ಟರ್ ನ ಪೈಲಟ್ ಗಳು ಅದನ್ನು ಮಹುಹಾದ್ ನಲ್ಲಿರುವ ತಾತ್ಕಾಲಿಕ ಹೆಲಿಪ್ಯಾಡ್ ನಲ್ಲಿ ಇಳಿಸಲು ಪ್ರಯತ್ನಿಸಿದಾಗ ಈ ದುರ್ಘಟನೆ ಸಂಭವಿಸಿದೆ.

Join Whatsapp
Exit mobile version