ಸೇನಾ ಹೆಲಿಕಾಪ್ಟರ್ ದುರಂತ: ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಮೃತ್ಯು

Prasthutha|

ದುರಂತದಲ್ಲಿ ಬಲಿಯಾದವರ ಸಂಖ್ಯೆ 14ಕ್ಕೇರಿಕೆ

- Advertisement -

ನವದೆಹಲಿ: ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್ ದುರಂತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನರಾಗಿದ್ದಾರೆ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.

- Advertisement -

ಎರಡು ವಾರಗಳ ಹಿಂದೆ ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್ ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ಕರೆತರಲಾಗಿತ್ತು. ಇತ್ತೀಚೆಗೆ ವರುಣ್ ಅವರ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಚರ್ಮ ಬ್ಯಾಂಕ್ನಿಂದ ಕಮಾಂಡೊ ಆಸ್ಪತ್ರೆಗೆ ಚರ್ಮ ರವಾನಿಸಲಾಗಿತ್ತು. ಆದರೂ ಅವರನ್ನು ಉಳಿಸಿಕೊಳ್ಳಲು ವೈದ್ಯರ ತಂಡ ಮಾಡಿದ ಶ್ರಮ ವಿಫಲವಾಯಿತು. ಇದರೊಂದಿಗೆ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದುರಂತದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಸೇರಿ 13 ಮಂದಿ ಮೃತಪಟ್ಟಿದ್ದರು.

Join Whatsapp