ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರ ವರದಿಯನ್ನು ಹೈಕಮಾಂಡ್ ಕೇಳಿದೆ: ಮಂಜುನಾಥ್ ಭಂಡಾರಿ

Prasthutha|

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​​ನಲ್ಲಿ ಪಟ್ಟದ ಆಟ ಜೋರಾಗಿರುವ ಬೆನ್ನಲ್ಲೇ ಹೈಕಮಾಂಡ್ ಮಧ್ಯ ಪ್ರವೇಶ ಮಾಡಿ ಖಡಕ್ ಸಂದೇಶ ರವಾನೆ ಮಾಡಿದೆ.

- Advertisement -

ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರ ವರದಿಯನ್ನು ಹೈಕಮಾಂಡ್ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ಸಚಿವ ಸತೀಶ್ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂಬ ಸ್ಪಷ್ಟೀಕರಣ ನೀಡಿದ್ದಾರೆ.

ಹೈಕಮಾಂಡ್ ಆದೇಶ ಉಲ್ಲಂಘಸುವವರು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿಗಳಲ್ಲ ಎಂದಿರುವ ಹೈಕಮಾಂಡ್ ಹೇಳಿರುವುದಾಗಿ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

- Advertisement -

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ, ಸಚಿವರ ಬದಲಾವಣೆ ಎಲ್ಲವೂ ಹೈಕಮಾಂಡ್ ನಾಯಕರು ನಿರ್ಧಾರ ಮಾಡಲಿದ್ದಾರೆ. ಈ ಸಂಬಂಧ ಯಾವುದೇ ಸಚಿವರು ಹೇಳಿಕೆಯನ್ನು ಕೊಡಬಾರದು. ನಾಯಕತ್ವ ಬದಲಾವಣೆಯ ತೀರ್ಮಾನವನ್ನು ತೆಗೆದುಕೊಳ್ಳುವುದು ಮಾಧ್ಯಮಗಳಲ್ಲ, ಪಕ್ಷದ ಹೈಕಮಾಂಡ್. ಪಕ್ಷದ ನಾಯಕರು ಮೊದಲಿಗೆ ಹೈಕಮಾಂಡ್ ನಾಯಕರ ಗಮನಕ್ಕೆ ತರಬೇಕು. ಇಂತಹ ಹೇಳಿಕೆ ನೀಡಿರುವವರ ವರದಿಯನ್ನು ಹೈಕಮಾಂಡ್‌ ನಾಯಕರು ಕೇಳಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.



Join Whatsapp