July 25, 2021

ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ, ಕಾದು ನೋಡಿ: ಯಡಿಯೂರಪ್ಪ

ಬೆಳಗಾವಿ: ಸಿಎಂ ರಾಜೀನಾಮೆಗೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆ ಆಗುತ್ತಿದೆ. ಈ ಕುರಿತು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿದ್ದು, ಇಂದು ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ, ಕಾದು ನೋಡಿ ಎಂದಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಸಂಜೆಯೊಳಗೆ ಸಂದೇಶ ಬರಲಿದೆ ಎಂದರು.
ಎರಡು ವರ್ಷಗಳ ಕೆಲಸ ನಿಮಗೆ ತೃಪ್ತಿ ತಂದಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಎಸ್ವೈ, ನಿಮಗೆ(ಮಾಧ್ಯಮದವರಿಗೆ) ತೃಪ್ತಿ ತಂದಿದ್ದರೆ ಸಾಕು ಎಂದು ನಗುನಗುತ್ತಲೇ ತೆರಳಿದರು.

ಅತಿವೃಷ್ಟಿಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಹಾನಿಯಾಗಿದೆ. ಜಲಾಶಯಗಳು ಭರ್ತಿಯಾಗಿದ್ದು, ಬೆಳಗಾವಿಯಲ್ಲಿ ಹೆಚ್ಚು ಹಾನಿಗೊಳಗಾಗಿದೆ. ಹಾಗಾಗಿ ಸಂತ್ರಸ್ತರ ಭೇಟಿಗೆ ತೆರಳುತ್ತಿದ್ದೇನೆ. ಕಳೆದ ಎರಡು ದಿನಗಳಿಂದ ಮಳೆ ಸ್ಪಲ್ಪ ಕಡಿಮೆ ಆಗಿದೆ. ಮೂರ್ನಾಲ್ಕು ದಿನಗಳಲ್ಲಿ ಮಳೆ ಪ್ರಮಾಣ ಇಳಿಮುಖವಾದರೆ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬರಲಿದೆ ಎಂದು ಸಿಎಂ ಹೇಳಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!