ನ್ಯಾಯಾಲಯ ಏನೇ ತೀರ್ಪು ಕೊಟ್ಟರೂ ಸಿಎಂ ಜೊತೆ ಹೈಕಮಾಂಡ್: ಪರಮೇಶ್ವರ್

Prasthutha|

ಬೆಂಗಳೂರು: ‘ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನ್ಯಾಯಾಲಯ ಏನೇ ತೀರ್ಪು ಕೊಟ್ಟರೂ ಮುಖ್ಯಮಂತ್ರಿಯವರ ಜೊತೆ ಹೈಕಮಾಂಡ್ ನಿಲ್ಲಲಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

- Advertisement -


ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ರಾಜ್ಯಪಾಲರ ನಿರ್ಣಯವನ್ನು ಕೋರ್ಟ್ ಪರಿಗಣಿಸುವುದಿಲ್ಲ ಎಂಬ ನಿರೀಕ್ಷೆ ಇದೆ. ಮುಖ್ಯಮಂತ್ರಿಯವರ ಸಹಿ, ಯಾವುದೇ ರೀತಿಯ ದಾಖಲೆಗಳು ಇಲ್ಲ. ನೋಂದಣಿಯಲ್ಲಿಯೂ ಅವರ ಹೆಸರು ಉಲ್ಲೇಖವಾಗಿಲ್ಲ. ಅದೆಲ್ಲವನ್ನು ಗಮನಿಸಿ ನ್ಯಾಯಾಲಯ ತೀರ್ಮಾನ ಕೊಡುತ್ತದೆ ಎಂದು ನಿರೀಕ್ಷೆಯಿದೆ’ ಎಂದರು.


‘ನಾವೆಲ್ಲರೂ ಮುಖ್ಯಮಂತ್ರಿ ಜೊತೆ ಇರುತ್ತೇವೆ. ಇದೇ 29ರಂದು ನ್ಯಾಯಾಲಯದಲ್ಲಿ ಮುಡಾ ಪ್ರಕರಣ ವಿಚಾರಣೆಗೆ ಬರಲಿದೆ. ಏನು ತೀರ್ಪು ಏನು ಬರುತ್ತದೆ ಎಂಬುದರ ಮೇಲೆ ಚರ್ಚೆ ಆಗಲಿದೆ’ ಎಂದರು.

- Advertisement -


‘ನಾನು ಕಾಂಗ್ರೆಸ್ನ ಶಿಸ್ತಿನ ಸಿಪಾಯಿ. ಪಕ್ಷದಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ವಹಿಸಿದರು ಪ್ರಾಮಾಣಿಕವಾಗಿ ಮಾಡಿದ್ದೇನೆ’ ಎಂದೂ ಪರಮೇಶ್ವರ ಹೇಳಿದರು.



Join Whatsapp