ಪೋಕ್ಸೋ ಪ್ರಕರಣದ ಆರೋಪಿ ಸ್ವಾಮೀಜಿಗೆ ಮಲಗಲು ಹಾಸಿಗೆ ನೀಡಲು ಒಪ್ಪಿದ ಹೈಕೋರ್ಟ್

Prasthutha|

ಬೆಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಜೈಲಿನಲ್ಲಿರುವ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಲಿಯೂರು ದುರ್ಗ ಹೋಬಳಿಯ ಹಂಗರಹಳ್ಳಿ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನ ಶ್ರೀಮಠದ ಬಾಲ ಮಂಜುನಾಥ ಸ್ವಾಮೀಜಿ ತನಗೆ ಮಲಗಲು ಹಾಸಿಗೆ, ಮನೆ ಊಟ ಬೇಕು ಎಂದು ಸಲ್ಲಿಸಿದ್ದ ಮಧ್ಯಂತರ ಮನವಿಗೆ ಹೈಕೋರ್ಟ್ ಅಸ್ತು ಎಂದಿದೆ.

- Advertisement -

ತಮ್ಮ ರಿಸ್ಕ್‌ನಲ್ಲಿ ಮಠದಿಂದ ಅಥವಾ ಮನೆಯಿಂದ ಊಟವನ್ನು ತರಿಸಿಕೊಳ್ಳಬಹುದಾಗಿದೆ. ತಂದ ಊಟವನ್ನು ಜೈಲು ಅಧಿಕಾರಿಗಳು ಪರೀಕ್ಷಿಸಿದ ನಂತರವೇ ಅರ್ಜಿದಾರರು ಸೇವಿಸಬೇಕು. ಅಗತ್ಯವಿದ್ದರೆ ಈ ಆದೇಶದ ಮಾರ್ಪಾಡಿಗೆ ಜೈಲು ಅಧಿಕಾರಿಗಳು ನ್ಯಾಯಾಲಯವನ್ನು ಕೋರಬಹುದು ಎಂದು ನ್ಯಾಯಪೀಠ ಕಾರಾಗೃಹದ ಸೂಪರಿಂಟೆಂಡೆಂಟ್ ಅವರಿಗೆ ನಿರ್ದೇಶಿಸಿದೆ.

ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸ್ವಾಮೀಜಿ ವಿರುದ್ಧ 2024ರ ಮಾರ್ಚ್ 7ರಂದು ದೂರು ದಾಖಲಾಗಿತ್ತು. ಪೊಲೀಸರು ಸ್ವಾಮೀಜಿಯನ್ನು ಪೋಕ್ಸೋ ಕಾಯಿದೆಯ ಅಡಿಯಲ್ಲಿ ಬಂಧಿಸಿದ್ದರು. ಮಾರ್ಚ್ 14ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

Join Whatsapp