ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್‌ ಸಮ್ಮತಿ

Prasthutha|

- Advertisement -

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಬೇಕು ಎಂದು ಕೋರಿ ಪಿಐಎಲ್ ಸಲ್ಲಿಕೆಯಾಗಿತ್ತು. ಕೋರ್ಟ್ ಮಂಗಳವಾರ ಅನುಮತಿ ನೀಡಿದೆ.

ನವೆಂಬರ್ 1 ರಿಂದ 3 ರ ತನಕ ಕನ್ನಡ ರಾಜ್ಯೋತ್ಸವ, ಸಾಂಸ್ಕೃತಿ ಕಾರ್ಯಕ್ರಮ ನಡೆಸಬಹುದು. ಆದರೆ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂಥ ಕಾರ್ಯಕ್ರಮ ನಡೆಸಬಾರದು ಎಂದು ನ್ಯಾಯಾಲಯ ಷರತ್ತು ಸೂಚಿಸಿದೆ.

- Advertisement -

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಬೇಕು ಎಂದು ಕೋರಿ ಚಾಮರಾಜಪೇಟೆ ನಾಗರಿಕ ಒಕ್ಕೂಟ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಅನುಮತಿ ನೀಡಿ ಈ ಕುರಿತು ಬೆಂಗಳೂರು ನಗರ ಜಿಲ್ಲಾಡಳಿತ ಹಾಗೂ ಇನ್ನಿತರ ಪ್ರಾಧಿಕಾರಗಳಿಗೆ ಕೋರ್ಟ್‌ ಸೂಚನೆ ನೀಡಿದೆ.

ಚಾಮರಾಜಪೇಟೆ ನಾಗರಿಕ ಒಕ್ಕೂಟ ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ರಾಜ್ಯದ ಧ್ವಜ ಮಾತ್ರ ಹಾರಿಸಲಾಗುತ್ತದೆ ಎಂದು ಅರ್ಜಿದಾರರು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ.



Join Whatsapp