Home ಟಾಪ್ ಸುದ್ದಿಗಳು ಸರಕಾರ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಕೇಸ್ ಹಿಂಪಡೆದ ಮಾಹಿತಿ ಕೇಳಿದ ಹೈಕೋರ್ಟ್

ಸರಕಾರ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಕೇಸ್ ಹಿಂಪಡೆದ ಮಾಹಿತಿ ಕೇಳಿದ ಹೈಕೋರ್ಟ್

ಬೆಂಗಳೂರು : ರಾಜ್ಯ ಸರಕಾರವು ಸಚಿವ ಸಂಪುಟದ ನಿರ್ಣಯ ಆಧರಿಸಿ ಶಾಸಕರು, ಸಂಸದರ ಹಾಗೂ ಇತರರ ವಿರುದ್ಧದ 61 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ಕೈಬಿಟ್ಟಿರುವ ಪ್ರಕರಣಗಳ ಮಾಹಿತಿ ನೀಡುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

ಜನಪ್ರತಿನಿಧಿಗಳ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವುದನ್ನು ಪ್ರಶ್ನಿಸಿ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್(ಪಿಯುಸಿಎಲ್) ಮತ್ತು ವಕೀಲರಾದ ಸುಧಾ ಕಾಟ್ವಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಹಿಂಪಡೆದಿರುವ ಪ್ರಕರಣಗಳ ವಿವರವನ್ನು ಒಂದು ವಾರದಲ್ಲಿ ನೀಡುವಂತೆ ಸೂಚನೆ ನೀಡಿದೆ.
ಗೃಹ ಸಚಿವರ ನೇತೃತ್ವದ ಉಪ ಸಮಿತಿ ಶಿಫಾರಸಿನ ಮೇರೆಗೆ ಶಾಸಕರು, ಸಂಸದರ ವಿರುದ್ಧದ 61 ಪ್ರಕರಣಗಳನ್ನು ರಾಜ್ಯ ಸಚಿವ ಸಂಪುಟ 2020ರ ಆಗಸ್ಟ್ 31ರಂದು ಹಿಂಪಡೆದು ಆದೇಶ ಹೊರಡಿಸಿತು. CRPC ಸೆಕ್ಷನ್ 321ರ ಮೇರೆಗೆ ಕೆಲ ಜನಪ್ರತಿನಿಧಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆದಿತ್ತು. ಇದು ನಿಯಮ ಬಾಹಿರ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

Join Whatsapp
Exit mobile version