ಡಾ. ಕಫೀಲ್ ಖಾನ್ ಅಮಾನತಿಗೆ ಕಾರಣ ನೀಡಿ | ಉತ್ತರ ಪ್ರದೇಶ ಸರಕಾರಕ್ಕೆ ಹೈಕೋರ್ಟ್ ಆದೇಶ

Prasthutha|

ಲಕ್ನೋ : ನಾಲ್ಕು ವರ್ಷಗಳಿಗೂ ಅಧಿಕ ಸಮಯದಿಂದ ಗೋರಖ್ ಪುರ ಆಸ್ಪತ್ರೆಯಿಂದ ಡಾ.ಕಫೀಲ್ ಖಾನ್ ಅವರನ್ನು ಅಮಾನತನ್ನು ಸಮರ್ಥಿಸಲು ಕಾರಣ ನೀಡುವಂತೆ ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರಕಾರಕ್ಕೆ ಆದೇಶಿಸಿದೆ.

- Advertisement -

ತನ್ನನ್ನು ಸೇವೆಯಿಂದ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಕಫೀಲ್ ಖಾನ್ ಅವರು ಜುಲೈ 29ರಂದು ಸಲ್ಲಿಸಿದ ಅರ್ಜಿಯ ಆಲಿಕೆಯನ್ನು ನಡೆಸಿದ ನ್ಯಾಯಮೂರ್ತಿ ಯಶ್ವಂತ್ ವರ್ಮಾ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.

ಗೋರಖ್ ಪುರದ ಬಾಬಾರಾಘವ್ ದೇಸ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ 2017ರಲ್ಲಿ ಆಮ್ಲಜನಕದ ಕೊರತೆಯಿಂದ 63 ಮಂದಿ ಮಕ್ಕಳು ಮೃತಪಟ್ಟ ಘಟನೆಗೆ ಸಂಬಂಧಿಸಿ ಕಫೀಲ್ ಖಾನ್ ಅವರನ್ನು ಅಮಾನತುಗೊಳಿಸಿತ್ತು. ಕರ್ತವ್ಯಲೋಪ, ಭ್ರಷ್ಟಾಚಾರ ಹಾಗೂ ವೈದ್ಯಕೀಯ ನಿರ್ಲಕ್ಷದ ಆರೋಪದಲ್ಲಿ ಅವರು 9 ತಿಂಗಳು ಜೈಲು ವಾಸ ಅನುಭವಿಸಿದ್ದರು.

- Advertisement -

ಆದರೆ 2019ರಲ್ಲಿ ಉತ್ತರ ಪ್ರದೇಶ ಸರಕಾರವು ಡಾ.ಕಫೀಲ್ ಅವರನ್ನು ಎಲ್ಲಾ ರೀತಿಯ ಆರೋಪಗಳಿಂದ ಮುಕ್ತಗೊಳಿಸಿತ್ತು ಹಾಗೂ ಮಕ್ಕಳ ಪ್ರಾಣವನ್ನು ರಕ್ಷಿಸಲು ಅವರು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಿದ್ದರೆಂದು ಶ್ಲಾಘಿಸಿತ್ತು. ಬಿಕ್ಕಟ್ಟಿನ ಸಂದರ್ಭದಲ್ಲಿ ತನ್ನದೇ ಖರ್ಚಿನಲ್ಲಿ ಆಕ್ಸಿಜನ್ ಸಿಲಿಂಡರ್ ಡಾ.ಕಫೀಲ್ ಆಸ್ಪತ್ರೆಗೆ ತರಿಸಿಕೊಂಡಿದ್ದರು ಹಾಗೂ ಇನ್ನೂ ಹೆಚ್ಚು ಆಕ್ಸಿಜನ್ ಸಿಲಿಂಡರ್ಗಳನ್ನು ಆಸ್ಪತ್ರೆಗೆ ಪೂರೈಕೆಯಾಗುವಂತೆ ಏರ್ಪಾಡುಗಳನ್ನು ಮಾಡಿದ್ದರು ಎಂದು ಶ್ಲಾಘಿಸಿತ್ತು.

Join Whatsapp