ಜೀವನಾಂಶ ಕೋರಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ವಿಚಾರಣಾ ನ್ಯಾಯಾಲಯಗಳಿಗೆ ಹೈಕೋರ್ಟ್ ನಿರ್ದೇಶನ

Prasthutha|

ಬೆಂಗಳೂರು: ಜೀವನಾಂಶ ಕೋರಿ ಸಲ್ಲಿಸಿದ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕೆಂದು ವಿಚಾರಣಾ ನ್ಯಾಯಾಲಯಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

- Advertisement -

ಕೌಟುಂಬಿಕ ಕಲಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಜೀವನಾಂಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಕೆಲವೊಂದು ಅರ್ಜಿಗಳು ವರ್ಷಗಳಿಂದ ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಗಮನಿಸಿದ ಹೈಕೋರ್ಟ್, ಇಂತಹ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ಇತ್ಯರ್ಥಪಡಿಸುವಂತೆ ವಿಚಾರಣಾ ನ್ಯಾಯಾಲಯಗಳಿಗೆ ಸೂಚಿಸಿದೆ.

60 ದಿನಗಳಲ್ಲಿ ಅರ್ಜಿಗಳನ್ನು ಇತ್ಯರ್ಥಪಡಿಸಬೇಕೆಂದು ನಿಯಮವಿದೆ. ಆದರೆ ಕೆಲವು ಪ್ರಕರಣಗಳು ವರ್ಷಗಳಿಂದ ಬಾಕಿ ಉಳಿದಿದ್ದು, ವಿಳಂಬದಿಂದಾಗಿ‌ ಜೀವನಾಂಶ ಕೋರಿದ ಅರ್ಜಿಗಳ ಉದ್ದೇಶವೇ ನಿರರ್ಥಕವಾಗಲಿವೆ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಹೇಳಿದೆ.



Join Whatsapp