ಬೆಂಗಳೂರು: ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಅವರು ಕಳೆದ ನಾಲ್ಕು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಸೋಮವಾರ (ಅ.21) ತೀರ್ಪು ಪ್ರಕಟಿಸಿದೆ.