ಅಕ್ರಮ ಫ್ಲೆಕ್ಸ್, ಹೋರ್ಡಿಂಗ್ಸ್ : ಬಿಬಿಎಂಪಿ, ಪೊಲೀಸ್ ಇಲಾಖೆಗೆ ಹೈಕೋರ್ಟ್ ತರಾಟೆ

Prasthutha|

- Advertisement -

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ಫ್ಲೆಕ್ಸ್, ಹೋರ್ಡಿಂಗ್ಸ್ ಹಾವಳಿ ಹೆಚ್ಚಾದ ಹಿನ್ನೆಲೆ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲು ಮಾಡಿಕೊಂಡಿದ್ದು, ಕ್ರಮ ಕೈಗೊಳ್ಳದ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆಯನ್ನ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.

ರಾಜ್ಯದಲ್ಲಿ ಈಗಾಗಲೇ 6.8 ಲಕ್ಷ ಅಕ್ರಮ ಜಾಹಿರಾತುಗಳಿವೆ ಎಂಬ ವರದಿಯಿದೆ. ರಸ್ತೆಗಳಲ್ಲಿ ಅಕ್ರಮ ಹೋರ್ಡಿಂಗ್​ ಗಳ ಹಾವಳಿ ಮುಂದುವರಿದಿದೆ. ಈ ಅಕ್ರಮ ಜಾಹಿರಾತುಗಳಿಂದಾಗಿ ಪಾದಚಾರಿಗಳಿಗೆ ಸಮಸ್ಯೆ ಹಾಗೂ ಸಂಚಾರದಟ್ಟಣೆಗೆ ಕಾರಣವಾಗುತ್ತಿದೆ. ಜೊತೆಗೆ ಕೋರ್ಟ್ ಆದೇಶಗಳಿದ್ದರೂ ಸಂಬಂಧಪಟ್ಟ ಪ್ರಾಧಿಕಾರಗಳು ಪಾಲಿಸಿಲ್ಲ ಎಂದು ಹೈಕೋರ್ಟ್ ವಾಗ್ದಾಳಿ ನಡೆಸಿದೆ.

- Advertisement -

ಈ ಕುರಿತು ನ್ಯಾಯಾಂಗ ನಿಂದನೆ ಏಕೆ ದಾಖಲಿಸಬಾರದೆಂದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್​ ನೋಟಿಸ್ ನೀಡಿದೆ. ಇದಕ್ಕೆ ಜುಲೈ.26 ರರೊಳಗೆ ಉತ್ತರಿಸುವಂತೆ ಆದೇಶಿಸಿದೆ.



Join Whatsapp