ಹೈಕೋರ್ಟ್ ಮಧ್ಯಂತರ ಆದೇಶದ ನೆಪದಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ: ಕ್ರಮಕೈಗೊಳ್ಳುವ ಭರವಸೆ ನೀಡಿದ ಎ.ಜಿ.

Prasthutha|

ಬೆಂಗಳೂರು: ಹಿಜಾಬ್ ಕುರಿತು ಹೈಕೋರ್ಟ್ ಮಧ್ಯಂತರ ಆದೇಶವನ್ನು ಇಟ್ಟುಕೊಂಡು ಅಧಿಕಾರಿಗಳು ಸಮಸ್ಯೆ ಮಾಡುತ್ತಿದ್ದಾರೆ ಎಂದು ವಕೀಲ ತಾಹೀರ್ ಅವರು ನನಗೆ ಅಹವಾಲು ಸಲ್ಲಿಸಿದ್ದಾರೆ. ಇದನ್ನು ಮುಖ್ಯ ಕಾರ್ಯದರ್ಶಿ ಗಮನಕ್ಕೆ ತಂದಿದ್ದೇನೆ. ಇದನ್ನು ಬಗೆಹರಿಸಲು ನಾಳೆ ಅಥವಾ ನಾಡಿದ್ದು ಸಂಬಂಧಪಟ್ಟವರ ಜೊತೆ ಸಭೆ ನಡೆಸುವಂತೆ ಹೇಳಿದ್ದೇನೆ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಸೋಮವಾರ ಹೈಕೋರ್ಟ್ ತ್ರಿಸದಸ್ಯ ಪೀಠಕ್ಕೆ ತಿಳಿಸಿದ್ದಾರೆ.

- Advertisement -

ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ಪೀಠಕ್ಕೆ ವಕೀಲ ತಾಹೀರ್ ಅವರು ಕೆಲವು ಶಿಕ್ಷಣ ಸಂಸ್ಥೆಗಳು ಹೈಕೋರ್ಟ್ ಮಧ್ಯಂತರ ಆದೇಶವನ್ನು ಇಟ್ಟುಕೊಂಡು ವಿದ್ಯಾರ್ಥಿನಿಯರು ಮತ್ತು ಶಿಕ್ಷಕರಿಗೆ ಕಿರುಕುಳ ನೀಡುತ್ತಿದೆ ಎಂದರು.

ಆಗ ನಾವದಗಿ, ಇದನ್ನು ಹೇಗೆ ಬಗೆಹರಿಸುತ್ತಾರೆ ಎಂಬುದನ್ನು ನಾನು ತಾಹೀರ್ ಅವರ ಗಮನಕ್ಕೆ ತರುತ್ತೇನೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಜೊತೆಗೂ ಮಾತನಾಡಿದ್ದು, ಅವರು ಸಮಸ್ಯೆಯಾಗದಂತೆ ನೋಡಿಕೊಳ್ಳುವ ಭರವಸೆ ನೀಡಿದ್ದಾರೆ. ಕ್ರಮಕೈಗೊಂಡ ವಿಚಾರಗಳನ್ನು ನಿಮಗೆ ಮತ್ತು ವಕೀಲರಿಗೆ ತಿಳಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು.

- Advertisement -

ಜನರ ಮುಂದೆ ಹಿಜಾಬ್ ತೆಗೆಯುವಂತೆ ಹೆಣ್ಣು ಮಕ್ಕಳಿಗೆ ಸೂಚಿಸಲಾಗುತ್ತಿದೆ. ಇದಕ್ಕಾಗಿ ಕನಿಷ್ಠ ಆ ಹಣ್ಣು ಮಕ್ಕಳಿಗೆ ಖಾಸಗಿ ಸ್ಥಳ ನೀಡಬೇಕು. ಇದನ್ನು ಟಿ ವಿ ಮಾಧ್ಯಮಗಳು ಸೆರೆ ಹಿಡಿಯುತ್ತಿವೆ. ಇದು ಮಕ್ಕಳ ಹಕ್ಕುಗಳ ಉಲ್ಲಂಘನೆ ಎಂದು ವಕೀಲರೊಬ್ಬರು ಹೇಳಿದರು.

ಆಗ ಪೀಠ: ಟಿ ವಿ ಚಾನೆಲ್ ಮುಂದೆ ಹೋಗಿ ವಾದಿಸಿ ಎಂದು ಉತ್ತರಿಸಿತು.



Join Whatsapp