ದಾವಣಗೆರೆ: ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕಪ್ಪ ಮತ್ತು ಅವರ ಮಗ ಸಚಿವ ಮಲ್ಲಿಕಾರ್ಜುನ್ ಅವರಿಗೆ ಏಕಕಾಲಕ್ಕೆ ಸಂಕಷ್ಟ ಬಂದೆರಗಿದ್ದು, ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಕುಕ್ಕರ್ ಹಂಚಿಕೆ ಮಾಡಿದ್ದ ಆರೋಪದಲ್ಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಚುನಾವಣೆ ಸಮಯದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಅವರ ಫೋಟೋಗಳನ್ನು ಅಂಟಿಸಿ ಕುಕ್ಕರ್, ಸೀರೆಯನ್ನು ಹಂಚಿಕೆ ಮಾಡಲಾಗಿತ್ತು. ಈ ಬಗ್ಗೆ ಇಬ್ಬರ ವಿರುದವೂ ಅಂದಿನ ఎసి ಸಿ.ಬಿ.ರಿಷಂತ್ ದೂರು ದಾಖಲಿಸಿದ್ದರು.
ದೂರು ದಾಖಲಾಗಿ 6 ತಿಂಗಳು ಕಳೆದಿದ್ದು, ಪೊಲೀಸರು ನ್ಯಾಯಾಲಯಕ್ಕೆ ಚಾರ್ಟ್ ಸಲ್ಲಿಸಿರಲ್ಲ. ಪೊಲೀಸರ ನಿರ್ಲಕ್ಷ್ಯ, ಚಾರ್ಜ್ ಶೀಟ್ ಹಾಕದ ಹಿನ್ನೆಲೆ ಪರಾಜಿತ ಅಭ್ಯರ್ಥಿ ಸುಬಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ರಿಟ್ ಅರ್ಜಿ ಕೈಗೆತ್ತಿಕೊಂಡ ಹೈಕೋರ್ಟ್ ಮುಖ್ಯ ಚುನಾವಣಾಧಿಕಾರಿ, ದಾವಣಗೆರೆ ಜಿಲ್ಲಾಧಿಕಾರಿ, ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಮಲ್ಲಿಕಾರ್ಜುನ್ ಅವರಿಗೆ ನೊಟೀಸ್ ನೀಡಿದೆ.
ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾದರೆ ತಂದೆ, ಮಗನಿಗೆ ಇಬ್ಬರಿಗೂ ಭಾರಿ ಸಂಕಷ್ಟ ಎದುರಾಗಲಿದೆ ಎಂದು ಹೇಳಲಾಗಿದೆ. ಪ್ರಜಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆಯಿದೆ ಎನ್ನಲಾಗಿದೆ.