ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ಮೇಲೆ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

Prasthutha: June 17, 2021

ಚುನಾವಣೆ ಸಂದರ್ಭದಲ್ಲಿ ಲಂಚ ಸೇರಿದಂತೆ ವಿವಿಧ ಆರೋಪಗಳ ಮೇಲೆ ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಮತ್ತು ಜನಾಧಿಪತ್ಯ ರಾಷ್ಟ್ರೀಯ ಸಭಾ (ಜೆಆರ್‌‌ಎಸ್) ನಾಯಕಿ ಸಿ.ಕೆ ಜಾನು ವಿರುದ್ಧ ಪ್ರಕರಣ ದಾಖಲಿಸುವಂತೆ ವಯನಾಡ್‌‌ ನ್ಯಾಯಾಲಯ ಬುಧವಾರ ಪೊಲೀಸರಿಗೆ ಸೂಚಿಸಿದೆ.

ಏಪ್ರಿಲ್‌ನಲ್ಲಿ ನಡೆಯಲಿದ್ದ ವಿಧಾನಸಭಾ ಚುನಾವಣೆಗೆ ಮುನ್ನ ಸುರೇಂದ್ರನ್ ಎನ್‌ಡಿಎಗೆ ಸೇರಲು ಜಾನು ಅವರಿಗೆ 10 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ವಿದ್ಯಾರ್ಥಿ ಸಂಘಟನೆ ಮುಸ್ಲಿಂ ಸ್ಟೂಡೆಂಟ್ಸ್ ಫೆಡರೇಶನ್‌ನ ರಾಜ್ಯ ಅಧ್ಯಕ್ಷ ಪಿ.ಕೆ ನವಾಸ್ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ವಯನಾಡ್‌‌ ಕಲ್ಪೆಟ್ಟಾದ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪ್ರಕರಣವನ್ನು ವಿಚಾರಣೆ ನಡೆಸುತ್ತಿತ್ತು.

ಐಪಿಸಿ ಸೆಕ್ಷನ್ಸ್ 171 ಬಿ (ಮತದಾನಕ್ಕೆ ಲಂಚ ನೀಡಿ ಪ್ರೇರೇಪಿಸುವುದು), ಐ 71 ಇ (ಲಂಚ) ಮತ್ತು 171 ಎಫ್ (ಅನಗತ್ಯ ಪ್ರಭಾವ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಕೆ.ಸಿ ಜಾನು ಚುನಾವಣೆಗೆ ಮುನ್ನ ಎನ್‌ಡಿಎಗೆ ಸೇರಲು ತನಗೆ 10 ಕೋಟಿ ನೀಡಬೇಕು ಎಂದು ಸುರೇಂದ್ರ ಅವರೊಂದಿಗೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ಸುರೇಂದ್ರನ್‌ ಜಾನು ಅವರಿಗೆ 10 ಲಕ್ಷ ರೂಪಾಯಿಗಳನ್ನು ನೀಡಿದರು” ಎಂದು ಈ ತಿಂಗಳ ಆರಂಭದಲ್ಲಿ, ಜೆಆರ್‌ಎಸ್ ರಾಜ್ಯ ಖಜಾಂಚಿ ಪ್ರಸೀತಾ ಅಜಿಕೋಡ್ ಅವರು ಆರೋಪಿಸಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಜಾನು ಅವರು ವಯನಾಡಿನ ಸುಲ್ತಾನ್ ಬತ್ತೇರಿಯಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತಿದ್ದರು.

ಕಳೆದ ವಾರ, ಮಜೇಶ್ವರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಬಿಎಸ್ಪಿ ಅಭ್ಯರ್ಥಿ ಕೆ. ಸುಂದರ ಅವರಿಗೆ ಲಂಚ ನೀಡಿದ ಆರೋಪದ ಮೇಲೆ ಕಾಸರಗೋಡು ‌ ಪೊಲೀಸರು ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಕ್ಷೇತ್ರದಲ್ಲಿ ಸುರೇಂದ್ರನ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಇಲ್ಲಿ ನಾಮಪತ್ರ ಹಿಂತೆಗೆದುಕೊಂಡ ನಂತರ ಸುಂದರ ಅವರು ಬಿಜೆಪಿಗೆ ಸೇರಿದ್ದರು. ಅವರಿಗೆ ಸ್ಥಳೀಯ ಬಿಜೆಪಿ ಮುಖಂಡರು 2.5 ಲಕ್ಷ ರೂ. ನೀಡಿದ್ದಾರೆ ಎಂದು ಆರೋಪಿಸಲಾಗಿದೆ

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ