ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಖಂಡಿಸಿ ಪ್ರತಿಭಟನೆ: ಡಿಕೆಶಿ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

Prasthutha|

ಬೆಂಗಳೂರು: ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಖಂಡಿಸಿ ಪ್ರತಿಭಟನೆ ನಡೆಸಿದ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

- Advertisement -

2022ರ ಜೂ.16ರಂದು ಕೆಪಿಸಿಸಿ ವತಿಯಿಂದ ರಾಜಭವನ ಚಲೋ ಪ್ರತಿಭಟನೆ ನಡೆಸಿದ ಹಿನ್ನೆಲೆ‌ ಶಿವಾಜಿನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಪ್ರಕರಣ ಸಂಬಂಧ 42ನೇ ಎಸಿಎಂಎಂ ಕೋರ್ಟ್ ಡಿಕೆ ಶಿವಕುಮಾರ್​ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಇದನ್ನು ರದ್ದುಗೊಳಿಸುವಂತೆ ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಕಿರಿಯ ಶ್ರೇಣಿಯ ಅಧಿಕಾರಿಯಿಂದ ಪ್ರಕರಣ ದಾಖಲಿಸಿದ ಹಿನ್ನೆಲೆ ಅರ್ಜಿ ಪುರಸ್ಕರಿಸಿ ಪ್ರಕರಣ ರದ್ದುಪಡಿಸಿತು.

- Advertisement -

ಜೂ.16ರಂದು ಕೆಪಿಸಿಸಿ ವತಿಯಿಂದ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ ಪ್ರತಿಭಟನೆಯನ್ನು ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಾತ್ರ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದರು. ಆದರೆ ಕ್ವೀನ್ಸ್​ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಿಂದ ಪ್ರತಿಭಟನೆ ರ್‍ಯಾಲಿ ನಡೆಸಲಾಗಿತ್ತು.

ಇತ್ತ, ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಹಿನ್ನೆಲೆ ಶಿವಾಜಿನಗರ ಪೊಲೀಸ್ ಠಾಣೆಯ ಸಬ್ ಇನ್​​ಸ್ಪೆಕ್ಟರ್ ಅವರು ಪ್ರಕರಣ ದಾಖಲಿಸಿದ್ದರು. ಅಲ್ಲದೆ, ದೂರಿನ ಅನ್ವಯ ಅಂತಿಮ ವರದಿಯನ್ನು 42ನೇ ಎಸಿಎಂಎಂ ಕೋರ್ಟ್​ಗೆ ಸಲ್ಲಿಸಲಾಗಿತ್ತು. ಅದರಂತೆ ನ್ಯಾಯಾಲಯವು ಸಮನ್ಸ್ ಕೂಡ ಜಾರಿ ಮಾಡಿತ್ತು.

Join Whatsapp