ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ ಹೈಕೋರ್ಟ್‌

Prasthutha|

ನವದೆಹಲಿ: ಜಾರಿ ನಿರ್ದೇಶನಾಲಯ (ಇ.ಡಿ.) ವಶದಲ್ಲಿ ಇರುವ ದೆಹಲಿ ಸಿಎಂ ಅರವಿಂದ ಕೇಜ್ರಿ ವಾಲ್‌ಗೆ ಮಧ್ಯಂತರ ಜಾಮೀನು ನೀಡಲು ದಿಲ್ಲಿ ಹೈಕೋರ್ಟ್‌ ನಿರಾಕರಿಸಿದ್ದು, ಮುಂದಿನ ವಿಚಾರಣೆಯನ್ನು ಎ.3ಕ್ಕೆ ನಿಗದಿಗೊಳಿಸಿದೆ.

- Advertisement -

ನ್ಯಾ| ಸ್ವರ್ಣಕಾಂತ್‌ ಶರ್ಮಾ ನೇತೃತ್ವದ ನ್ಯಾಯಪೀಠ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ. ಈ ಬಗ್ಗೆ ಎ.2ರ ಒಳಗಾಗಿ ಪ್ರತಿಕ್ರಿಯೆ ನೀಡುವಂತೆಯೂ ಇ.ಡಿ.ಗೆ ಆದೇಶಿಸಿದೆ.

ಇ.ಡಿ. ಪರ ವಾದಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌.ವಿ.ರಾಜು, ಕೇಜ್ರಿವಾಲ್‌ ಪರ ವಕೀಲರು ಕೊನೆಗಳಿಗೆಯಲ್ಲಿ ಅರ್ಜಿ ಸಂಬಂಧಿಸಿದಂತೆ ನಮಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ನಾವು ತತ್‌ಕ್ಷಣದ ಪ್ರತಿಕ್ರಿಯೆ ನೀಡಲು ಸಾಧ್ಯವಾಗುತ್ತಿಲ್ಲ. ಕೆಲವು ಅಂಶ ಗಳನ್ನು ಪರಿಶೀಲಿಸಿ, ಪ್ರತಿಕ್ರಿಯೆ ನೀಡಲು ನಮಗೆ ಸಮಯಬೇಕಿದೆ ಎಂದರು.



Join Whatsapp