ಚಾಮರಾಜನಗರ ದುರಂತ | ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ!

Prasthutha|

ಬೆಂಗಳೂರು : ಜಿಲ್ಲೆಗಳಿಗೆ ಆಕ್ಸಿಜನ್‌ ಪೂರೈಕೆಯಲ್ಲಿ ಸಂಪೂರ್ಣ ವಿಫಲತೆ ಕಂಡಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್‌, ಸೂಕ್ತ ಮಾರ್ಗಸೂಚಿ ಇಲ್ಲದಿರುವುದೇ ಚಾಮರಾಜನಗರದಲ್ಲಿ 24 ಸೋಂಕಿತರ ಸಾವಿಗೆ ಕಾರಣ ಎಂದು ಸರಕಾರಕ್ಕೆ ಛೀಮಾರಿ ಹಾಕಿದೆ.

- Advertisement -

ತಕ್ಷಣವೇ ಸ್ಪಷ್ಟನೀತಿ ರೂಪಿಸುವಂತೆ ತಾಕೀತು ಮಾಡಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ನೇತೃತ್ವದ ವಿಭಾಗೀಯ ಪೀಠ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

ಕೊರೋನಾ ನಿಯಂತ್ರಿಸುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ತೋರಿದ ಬಗ್ಗೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿ ಪ್ರತಿಕ್ರಿಯಿಸಿದ ನ್ಯಾಯಪೀಠ, ಯಾವ ವಿಧಾನದಲ್ಲಿ ಜಿಲ್ಲಾಸ್ಪತ್ರೆಗಳಿಗೆ ಆಕ್ಸಿಜನ್‌ ಪೂರೈಸಲಾಗುತ್ತಿದೆ? ದಿನಕ್ಕೆ ಎಷ್ಟು ಆಕ್ಸಿಜನ್ ಅಗತ್ಯವಿದೆ ಎಂಬುದನ್ನು ಹೇಗೆ ಅಂದಾಜು ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದೆ.

- Advertisement -

ಆಕ್ಸಿಜನ್‌ ಪೂರೈಕೆಗೆ ಸ್ಪಷ್ಟಮಾರ್ಗಸೂಚಿ ಇಲ್ಲದಿರುವುದರಿಂದಲೇ ಚಾಮರಾಜನಗರದಲ್ಲಿ ದುರ್ಘಟನೆ ಸಂಭವಿಸಿದೆ. ಕೂಡಲೇ ಹೊಸ ಮಾರ್ಗಸೂಚಿ ಸಿದ್ಧಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಆಕ್ಸಿಜನ್ ತಲುಪಿಸಬೇಕು. ಆಕ್ಸಿಜನ್‌ ಎಲ್ಲಿ ಲಭ್ಯವಾಗುತ್ತದೆ? ಆಕ್ಸಿಜನ್ ಗೆ ಎಷ್ಟು ಬೇಡಿಕೆಯಿದೆ? ಎಷ್ಟುಪೂರೈಸಬೇಕು? ಎಂಬ ಅಂಕಿ-ಅಂಶ ಸಂಗ್ರಹಿಸಿ, ಕೇಂದ್ರೀಕೃತ ಮಾಹಿತಿಯುಳ್ಳ ವ್ಯವಸ್ಥೆ ರೂಪಿಸಬೇಕು ಎಂದು ಸರಕಾರಕ್ಕೆ ಸಲಹೆ ನೀಡಿದೆ.




Join Whatsapp