ಬೆಂಗಳೂರು: ಆದಾಯ ತೆರಿಗೆ ಇಲಾಖೆಗೆ 1,100 ಕೋಟಿ ರೂ. ಪಾವತಿಸಲು ಇ-ಕಾಮರ್ಸ್ ಕಂಪನಿ ಫ್ಲಿಪ್ಕಾರ್ಟ್ಗೆ ಆದಾಯ ತೆರಿಗೆ ಆಯುಕ್ತರು ನೀಡಿರುವ ತೀರ್ಪಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮುಂದಿನ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ನಿಗದಿಪಡಿಸಲಾಗಿದ್ದು, ಅಲ್ಲಿಯವರೆಗೂ ಫ್ಲಿಪ್ಕಾರ್ಟ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಸೂಚಿಸಿದೆ.
ಆದಾಯ ತೆರಿಗೆ ಆಯುಕ್ತರು ನೀಡಿರುವ ತೀರ್ಪಿನ ವಿರುದ್ಧ ಫ್ಲಿಪ್ಕಾರ್ಟ್ ಕರ್ನಾಟಕ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿತ್ತು.
ಬಾಕಿ ಪಾವತಿಗೆ ಸಾಕಷ್ಟು ಕಾಲಾವಕಾಶ ನೀಡಲಾಗಿಲ್ಲ. ಬಾಕಿ ಪಾವತಿಗೆ ಕೇವಲ ನಾಲ್ಕು ದಿನಗಳ ಕಾಲಾವಕಾಶ ನೀಡಿರುವುದಕ್ಕೆ ಯಾವುದೇ ಸಮರ್ಥನೆಗಳಿಲ್ಲ. ಇದರಿಂದಾಗಿ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಪ್ರಶ್ನಿಸುವುದಕ್ಕೂ ನಿರ್ಬಂಧ ವಿಧಿಸಿದಂತಾಗಿತ್ತು ಎಂದು ಫ್ಲಿಪ್ಕಾರ್ಟ್ ಅರ್ಜಿಯಲ್ಲಿ ಉಲ್ಲೇಖಿಸಿತ್ತು.