ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

Prasthutha|

ಬೆಂಗಳೂರು: ನಗರ್ತಪೇಟೆಯ ಹಲ್ಲೆ ಪ್ರಕರಣವೊಂದನ್ನು ಕೋಮು ಬಣ್ಣ ನೀಡಿ ಪ್ರತಿಭಟನೆ ನಡೆಸಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದಡಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.

- Advertisement -

ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ನನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಪಡಿಸಬೇಕು’ ಎಂದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ ತೇಜಸ್ವಿ ಸೂರ್ಯ ಪರ ವಾದ ಮಂಡಿಸಿದ ವಕೀಲ ಪಿ. ಪ್ರಸನ್ನ ಕುಮಾರ್, ಅರ್ಜಿದಾರರ ವಿರುದ್ಧದ ಆರೋಪಗಳಿಗೆ ಯಾವುದೇ ಪುರಾವೆಗಳಿಲ್ಲ. ವಿನಾಕಾರಣ ಅವರಿಗೆ ತೊಂದರೆ ನೀಡುವ ಉದ್ದೇಶದಿಂದ ರಾಜಕೀಯ ಪ್ರೇರಿತವಾಗಿ ಈ ಪ್ರಕರಣ ದಾಖಲಿಸಲಾಗಿದೆ. ಹಾಗಾಗಿ, ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿದ್ದರು.



Join Whatsapp