ಹೈಕೋರ್ಟ್‌ ಜಾಮೀನು ಸಿಕ್ಕರೂ ದೇವಾಂಗನಾ ಕಲಿತಾ, ನತಾಶಾ, ಆಸಿಫ್‌ ಬಿಡುಗಡೆ ವಿಳಂಬಕ್ಕೆ ದೆಹಲಿ ಪೊಲೀಸರ ಹೈಡ್ರಾಮ!

Prasthutha: June 16, 2021

ನವದೆಹಲಿ : ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಭಯೋತ್ಪಾದನೆ ಚಟುವಟಿಕೆಗಳಿಗೆ ಸಂಬಂಧಿಸಿದ ಕಠಿಣ ಕಾನೂನುಗಳಡಿ ಬಂಧಿತರಾಗಿದ್ದ ವಿದ್ಯಾರ್ಥಿ ನಾಯಕರಿಗೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿದ್ದರೂ, ಅವರ ಬಿಡುಗಡೆಗೆ ಪೊಲೀಸರು ಇಂದು ಮೀನಾಮೇಷ ಎಣಿಸಿದ ಘಟನೆ ನಡೆದಿದೆ. ಈ ಸಂಬಂಧ ಕಾರ್ಕರ್ಡೂಮ ಕೋರ್ಟ್‌ ನಲ್ಲಿ ಇಂದು ದೊಡ್ಡ ಹೈಡ್ರಾಮವೇ ನಡೆದಿದೆ.

ವಿದ್ಯಾರ್ಥಿ ನಾಯಕರಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್‌, ಆಸಿಫ್‌ ಇಕ್ಬಾಲ್‌ ತನ್ಹಾ ಮುಂತಾದವರಿಗೆ ನಿನ್ನೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿತ್ತು. ಆದರೆ, ಅವರಿಗೆ ಜಾಮೀನು ನೀಡಿದವರ ವಿಳಾಸಗಳನ್ನು ಪರಿಶೀಲಿಸಲು ವಿಳಂಬವಾಗುವುದರಿಂದ, ಅವರ ಬಿಡುಗಡೆಗೆ ಇನ್ನೂ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಪೊಲೀಸರು ಕೋರ್ಟ್‌ ನಲ್ಲಿ ಅರ್ಜಿ ಹಾಕಿದ್ದರು.

ವಿದ್ಯಾರ್ಥಿ ನಾಯಕರ ಬಿಡುಗಡೆ ವಿಳಂಬಗೊಳಿಸಲು, ಉದ್ದೇಶಪೂರ್ವಕವಾಗಿ ಪೊಲೀಸರು ಯತ್ನಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ನ್ಯಾಯವಾದಿಗಳು ಆಪಾದಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಮಾಜಿ ರಾಜ್ಯಸಭಾ ಸದಸ್ಯೆ ಬೃಂದಾ ಕಾರಟ್‌, ಕಾರ್ಯಕರ್ತ ಗೌತಮ್‌ ಭಾನ್‌ ಮತ್ತು ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯ, ಜಾಮಿಯಾ ಮಿಲ್ಲಿಯಾ ವಿಶ್ವವಿದ್ಯಾಲಯದ ಹಲವು ಪ್ರೊಫೆಸರ್‌ ಗಳು ವಿದ್ಯಾರ್ಥಿಗಳಿಗೆ ಜಾಮೀನು ಭದ್ರತೆ ನೀಡಿದ್ದಾರೆ.

ವಿದ್ಯಾರ್ಥಿಗಳ ಬಿಡುಗಡೆ ಪ್ರಕ್ರಿಯೆ ವಿಳಂಬ ಮಾಡಲು ಪೊಲೀಸರು ಅನಗತ್ಯ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ವಿದ್ಯಾರ್ಥಿಗಳು ಜಾಮೀನಿನಲ್ಲಿ ಬಿಡುಗಡೆಯಾಗುವುದಕ್ಕೆ ಮುನ್ನಾ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿ, ಬಿಡುಗಡೆ ತಡೆಯುವ ಉದ್ದೇಶದಿಂದ ಪೊಲೀಸರು ಈ ರೀತಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ