ದಲಿತ ಉದ್ಯಮಿಗಳ ಸಮಸ್ಯೆ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಮಿತಿ ರಚನೆ: ಎಂ ಬಿ ಪಾಟೀಲ್‌

Prasthutha|

ಬೆಂಗಳೂರು: ರಾಜ್ಯದ ದಲಿತ ಉದ್ಯಮಿಗಳು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಭಾರೀ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ತಿಳಿಸಿದ್ದಾರೆ.

- Advertisement -


ಖನಿಜ ಭವನದಲ್ಲಿ ಇಂದು ನಡೆದ ರಾಜ್ಯಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ ಅಧ್ಯಕ್ಷತೆಯ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಸದಸ್ಯರ ಜತೆ ನಡೆದ ಸಭೆಯಲ್ಲಿ ಸಚಿವರು ಎಂ.ಬಿ‌.ಪಾಟೀಲ್ ಈ ಘೋಷಣೆ ಮಾಡಿದ್ದಾರೆ.


ದಲಿತ ಉದ್ದಿಮೆದಾರರು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಆಲಿಸುವುದು ಮತ್ತು ಅದಕ್ಕೆ ಪರಿಹಾರ ಕಂಡುಹಿಡಿಯುವ ಕೆಲಸವನ್ನು ಈ ಸಮಿತಿ ಮಾಡಲಿದೆ ಎಂದು ಅವರು ಹೇಳಿದರು.

Join Whatsapp
Exit mobile version