ಮಲ್ಪೆ ಹತ್ಯೆ ಸಂಬಂಧ ಉನ್ನತ ಮಟ್ಟದ ತನಿಖೆ: ಶಾಸಕ ಯಶ್ ಪಾಲ್ ಸುವರ್ಣ

Prasthutha|

ಉಡುಪಿ: ಜಿಲ್ಲೆಯ ನೇಜಾರುವಿನ ತೃಪ್ತಿ ನಗರದಲ್ಲಿ ನಡೆದ ತಾಯಿ ಮತ್ತು ಮೂರು ಮಕ್ಕಳ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಉನ್ನತ ಮಟ್ಟದ ತನಿಖೆ ನಡೆಸುತ್ತಿದ್ದಾರೆ ಎಂದು ಸ್ಥಳೀಯ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

- Advertisement -

ಘಟನೆ ಸ್ಥಳಕ್ಕೆ ಶಾಸಕರು ಭೇಟಿ ನೀಡಿದ್ದಾರೆ. ಈ ಬಗ್ಗೆ ಪೊಲೀಸರ ಜೊತೆ ಮಾತನಾಡಿದ್ದೇನೆ. ಕೌಟುಂಬಿಕ ವಿಚಾರ ಹಿನ್ನೆಲೆಯಲ್ಲಿ ಕೃತ್ಯ ಆಗಿರಬಹುದು ಎಂದು ಮೇಲ್ನೋಟಕ್ಕೆ ಅನ್ನಿಸುತ್ತಿದೆ. ಉಡುಪಿ ಎಸ್ಪಿ ಡಾ. ಅರುಣ್ ಈಗಾಗಲೇ ತಂಡವನ್ನು ರಚನೆ ಮಾಡಿದ್ದಾರೆ. ಕೊಲೆಗಾರನನ್ನು ಪತ್ತೆಹಚ್ಚಲು ಈಗಾಗಲೇ ಪೊಲೀಸರು ಬೆನ್ನು ಬಿದ್ದಿದ್ದಾರೆ. ಈ ಕೃತ್ಯ ಬಹಳ ಬೇಸರ ತರಿಸುವಂತದ್ದು. ದೀಪಾವಳಿ ಈ ಸಂದರ್ಭದಲ್ಲಿ ಘಟನೆ ಎಲ್ಲರ ದುಃಖಕ್ಕೆ ಕಾರಣವಾಗಿದೆ. ಕುಟುಂಬದ ಬಗ್ಗೆ ಮಾಹಿತಿ ಇದ್ದೇ ಈ ಕೃತ್ಯ ಎಸಗಿರುವ ಬಗ್ಗೆ ಶಂಕೆ ಇದೆ ಎಂದು ಅವರು ಹೇಳಿದ್ದಾರೆ.

ಹತ್ಯೆಗೀಡಾದವರಲ್ಲಿ ಓರ್ವರಾದ ಅಫ್ನಾನ್(23) ಬೆಂಗಳೂರು ಏರ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿಯಷ್ಟೇ ರಜೆಯಲ್ಲಿ ತವರಿಗೆ ಬಂದಿದ್ದರು. ಮನೆಯ ಯಜಮಾನ ನೂರ್ ಮಹಮ್ಮದ್ ಸೌದಿ ಅರೇಬಿಯಾದಲ್ಲಿ ಉದ್ಯೋಗಿಯಾಗಿದ್ದಾರೆ. ತಾಯಿ ಹಸೀನಾ(46)ಗೃಹಿಣಿಯಾಗಿದ್ದರು. ಅಯ್ನಾಝ್(21) ಲಾಜಿಸ್ಟಿಕ್ಸ್ ಸಂಸ್ಥೆಯಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದು, ಆಸಿಂ(12) ಉಡುಪಿಯಲ್ಲಿ 8ನೇ ತರಗತಿ ಓದುತ್ತಿದ್ದನು.

- Advertisement -

ಏಕಾಏಕಿ ಮನೆಗೆ ನುಗ್ಗಿ ದುಷ್ಕರ್ಮಿ ಹಸೀನಾ, ಅಫ್ನಾನ್,ಅಯ್ನಾಝ್ ಗೆ ಮೊದಲು ಇರಿದಿದ್ದಾನೆ. ಬೊಬ್ಬೆ ಕೇಳಿ ಆಟವಾಡುತ್ತಿದ್ದ ಆಸೀಮ್ ಒಳ ಬರುತ್ತಿದ್ದಂತೆ ಆತನನ್ನೂ ನಿರ್ದಯವಾಗಿ ಇರಿದು ಕೊಂದಿದ್ದಾನೆ. ಪೊಲೀಸರು ನಾಲ್ಕು ತಂಡಗಳು ಉನ್ನತ ಮಟ್ಟದ ತನಿಖೆ ನಡೆಸುತ್ತಿವೆ. ಕೊಲೆಗಾರ ಬೆಂಗಳೂರಿನಿಂದ ಬಂದು ಕೊಲೆ ಮಾಡಿ ಪರಾರಿಯಾದ ಬಗ್ಗೆ ಅನುಮಾನವುಂಟಾಗಿದ್ದು, ರಿಕ್ಷಾ ಚಾಲಕರೋರ್ವರು ತನ್ನ ರಿಕ್ಷಾದಲ್ಲಿ ಈತ ಬಂದಿದ್ದಾನೆಂದು ಮಾಹಿತಿ ನೀಡಿದ್ದಾರೆ.

Join Whatsapp