ಮಂಗಳೂರು ಸೆಂಟ್ರಲ್ ಮಾರ್ಕೆಟ್ ನೆಲಸಮ ಕಾಮಗಾರಿಗೆ ಕರ್ನಾಟಕ ಹೈಕೋರ್ಟ್ ನಿಂದ ತಡೆಯಾಜ್ಞೆ

Prasthutha|

ಮಂಗಳೂರು ಮಹಾನಗರ ಪಾಲಿಕೆಯು ಏಕಾಏಕಿ ನಗರದ ಸೆಂಟ್ರಲ್ ಮಾರ್ಕೆಟ್ ಕಟ್ಟಡವನ್ನು ರಾತ್ರೋ ರಾತ್ರಿ ನೆಲಸಮ ಮಾಡುವ ಕಾರ್ಯಕ್ಕೆ ಕೈ ಹಾಕಿತ್ತು. ಸದ್ಯ ಕರ್ನಾಟಕ ಹೈಕೋರ್ಟ್ ನೆಲಸಮ ಕಾಮಗಾರಿಗೆ ತಡೆಯಾಜ್ಞೆ ನೀಡಿದೆ. ಕಾಮಗಾರಿಯನ್ನು ತಾತ್ಕಾಲಿಕಾಅಗಿ ಸ್ಥಗಿತಗೊಳಿಸುವಂತೆ ಆದೇಶಿಸಿದೆ. ಸ್ಮಾರ್ಟ್ ಸಿಟಿ ಅಡಿಯಲ್ಲಿ ನೂತನ ಕಟ್ಟಡ ನಿರ್ಮಿಸುವುದಾಗಿ ಹೇಳಿ ವ್ಯಾಪಾರಿಗಳಿಗೆ ಯಾವುದೇ ಮುನ್ಸೂಚನೆ ನೀಡದೆ ಹಳೇ ಕಟ್ಟಡವನ್ನು ನೆಲಸಮಗೊಳಿಸಿತ್ತೆಂದು ವ್ಯಾಪಾರಿಗಳು ಆರೋಪಿಸಿದ್ದರು.

- Advertisement -

ನೆಲಸಮ ಕಾಮಗಾರಿಯನ್ನು  ಮನಪಾ ಮೇ 26 ರಿಂದಲೇ ಪ್ರಾರಂಭಿಸಿತ್ತು. ಅದು ನಿನ್ನೆ ರಾತ್ರಿ ವರೆಗೆ ಮುಂದುವರೆದಿತ್ತು. ಆದರೆ ಮನಪಾ ಇದೀಗಾಗಲೇ ಶೇಕಡ 70ರಷ್ಟು ನೆಲ ಸಮ ಕಾಮಗಾರಿಯನ್ನು ಮಾಡಿಯಾಗಿದೆ ಎಂದು ಹೇಳಲಾಗುತ್ತಿದೆ.  ಇದನ್ನು ಪ್ರಶ್ನಿಸಿ ಮಾರ್ಕೆಟ್ ನ ಕೆಲ ವ್ಯಾಪಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಧೀಶ ಸಚಿನ್ ಮಗ್ದೂಮ್ ಅವರು ಈ ಕಾಮಗಾರಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದಾರೆ. ಹೈಕೋರ್ಟ್ ನ ಈ ಆದೇಶವನ್ನು ಪ್ರಶ್ನಿಸಿ ಮತ್ತು ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಮರು ಅರ್ಜಿ ಸಲ್ಲಿಸುತ್ತೇವೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿಯವರು ಹೇಳಿದ್ದಾರೆ.



Join Whatsapp