ಎನ್ ಐಎ ದಾಳಿ ಖಂಡಿಸಿ ಕಾಪುವಿನಲ್ಲಿ ಹೆದ್ದಾರಿ ತಡೆ

Prasthutha|

ಕಾಪು: ರಾಜ್ಯ ಸೇರಿ ದೇಶಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಾಯಕರ ಮನೆ ಮತ್ತು ಸಂಘಟನೆಯ ಕಚೇರಿ ಮೇಲೆ ನಡೆದ ದಾಳಿಯನ್ನು ಖಂಡಿಸಿ ಕಾಪುವಿನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

- Advertisement -


ಕಾಪು ಪಟ್ಟಣ ಬಳಿ ಜಮಾವಣೆಗೊಂಡ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.


ಬಿಜೆಪಿ ಮತ್ತು ಆರ್ ಎಸ್ಎಸ್ ಸೂಚನೆಯಂತೆ ಎನ್ ಐಎ ಮತ್ತು ಇ.ಡಿ. ಅಧಿಕಾರಿಗಳು ಪಿಎಫ್ ಐ ಮತ್ತು ಎಸ್ ಡಿಪಿಐಯನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ. ಇದರಿಂದ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ. ಕಾನೂನು ಪ್ರಕಾರ ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದ್ದಾರೆ.

- Advertisement -

Join Whatsapp