ಎನ್ ಐಎ ದಾಳಿ ಖಂಡಿಸಿ ಸುರತ್ಕಲ್ ನಲ್ಲಿ ಹೆದ್ದಾರಿ ತಡೆ

Prasthutha|

ಸುರತ್ಕಲ್: ದೇಶಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಾಯಕರ ಮನೆ ಮತ್ತು ಸಂಘಟನೆಯ ಕಚೇರಿ ಮೇಲೆ ನಡೆದ ದಾಳಿಯನ್ನು ಖಂಡಿಸಿ ಸುರತ್ಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.


ಸುರತ್ಕಲ್ ಜಂಕ್ಷನ್ ಬಳಿ ಜಮಾವಣೆಗೊಂಡ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

- Advertisement -


ಬಿಜೆಪಿ ಮತ್ತು ಆರ್ ಎಸ್ಎಸ್ ಸೂಚನೆಯಂತೆ ಎನ್ ಐಎ ಮತ್ತು ಇ.ಡಿ. ಅಧಿಕಾರಿಗಳು ಪಿಎಫ್ಐ ಮತ್ತು ಎಸ್ ಡಿಪಿಐಯನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ. ಇದರಿಂದ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ. ಕಾನೂನು ಪ್ರಕಾರ ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಸಿದರು.

- Advertisement -