Home ಟಾಪ್ ಸುದ್ದಿಗಳು ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ: ರಘುಪತಿ ಭಟ್ ಗೆ ತಿವಿದ...

ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ: ರಘುಪತಿ ಭಟ್ ಗೆ ತಿವಿದ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ

ಉಡುಪಿ: ತರಗತಿ ಮತ್ತು ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ದ್ವಿತೀಯ ಪರೀಕ್ಷೆ ಬರೆಯದೇ ವಾಪಸ್ ಆದ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಮಾಜಿ ಶಾಸಕ ರಘುಪತಿ ಭಟ್ ವಿರುದ್ಧ ಟ್ವೀಟ್ ಮಾಡಿ ಹರಿಹಾಯ್ದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಆಲಿಯಾ ಅಸಾದಿ, ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ, ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ ಎಂದು ಹೇಳಿದ್ದಾರೆ.

ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು. ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ, ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಈ ಹಿಂದೆ ಹಿಜಾಬ್ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಣೆ ಮಾಡಲಾಗಿತ್ತು. ಇದರಲ್ಲಿ ಮಾಜಿ ಶಾಸಕ ರಘುಪತಿ ಭಟ್ ಒತ್ತಡ ಹೇರಿದ್ದರು ಎಂದು ತಿಳಿದು ಬಂದಿತ್ತು.

ಈ ವಿಚಾರವಾಗಿ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಟ್ವೀಟ್ ಮಾಡಿ ರಘುಪತಿ ಭಟ್ ಗೆ ತಿವಿದಿದ್ದಾರೆ.

Join Whatsapp
Exit mobile version