Home ಟಾಪ್ ಸುದ್ದಿಗಳು ಹಿಜಾಬ್ ನಿಷೇಧ ವಾಪಸ್ | ನಾಳೆ ಹಿಂದೂಗಳು ಕೇಸರಿ ಶಾಲು ಧರಿಸಿ ಬರುತ್ತಾರೆ ಎಂದ ಯತ್ನಾಳ್

ಹಿಜಾಬ್ ನಿಷೇಧ ವಾಪಸ್ | ನಾಳೆ ಹಿಂದೂಗಳು ಕೇಸರಿ ಶಾಲು ಧರಿಸಿ ಬರುತ್ತಾರೆ ಎಂದ ಯತ್ನಾಳ್

ವಿಜಯಪುರ: ಹಿಜಾಬ್ ನಿಷೇಧ ವಾಪಸ್ ಪಡೆದರೆ ನಾಳೆ ಹಿಂದೂಗಳು ಕೇಸರಿ ಶಾಲು, ಹಣೆಗೆ ತಿಲಕ ಇಟ್ಟುಕೊಂಡು ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಹಿಜಾಬ್ ನಿಷೇಧ ವಾಪಸ್ ಪಡೆಯುವ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಹಿಜಾಬ್ ನಿಷೇಧವನ್ನ ಬಿಜೆಪಿ ಮಾಡಿಲ್ಲ. ಶಾಲೆಯಲ್ಲಿ ಸಮಾನತೆ ಇರಲಿ ಅಂತಾ ಬಾಬಾಸಾಹೇಬ್ ಅಂಬೇಡ್ಕರ್ ಒಂದೇ ಸಮವಸ್ತ್ರದ ಕಾಯ್ದೆ ಮಾಡಿದ್ರು. ಈ ರೀತಿ ಅವರವರಿಗೆ ತಿಳಿದಿದ್ದನ್ನ ಅವರು ಧರಿಸಿ ಬರೋದಾದ್ರೆ, ನಾಳೆ ಹಿಂದೂಗಳು ಕೇಸರಿ ಶಾಲು, ಹಣೆಗೆ ತಿಲಕ ಇಟ್ಟುಕೊಂಡು ಬರುತ್ತಾರೆ. ಇದು ಸಂಘರ್ಷಕ್ಕೆ ಹಾದಿ ಆಗುತ್ತೆ ಎಂದರು. ಒಟ್ಟಿನಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಸ್ಲಿಮರ ಪುಷ್ಟೀಕರಣಕ್ಕೆ ಸಿದ್ದರಾಮಯ್ಯ ನಿಂತಿದ್ದಾರೆ. ಲೋಕಸಭೆಯಲ್ಲಿ ಅವರೆಲ್ಲ ಇವರಿಗೆ ಮತ ಚಲಾಯಿಸ್ತಾರೆ ಎಂದುಕೊಂಡಿದ್ದಾರೆ ಎಂದು ಹೇಳಿದರು.

Join Whatsapp
Exit mobile version