ಹಿಜಾಬ್ ವಿಚಾರ: ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ

Prasthutha|

ನವದೆಹಲಿ: ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.

- Advertisement -


ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠ ನಾಳೆ ಕರ್ನಾಟಕ ಹೈಕೋರ್ಟ್ನ ಆದೇಶದ ವಿರುದ್ಧದ ಮೇಲ್ಮನವಿಗಳ ಬ್ಯಾಚ್ ನ ವಿಚಾರಣೆ ನಡೆಸಲಿದೆ.
ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿದ್ದಕ್ಕಾಗಿ ಮುಸ್ಲಿಮ್ ವಿದ್ಯಾರ್ಥಿನಿಯರ ಗುಂಪು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಮಾರ್ಚ್ 15 ರಂದು ತೀರ್ಪು ನೀಡಿತ್ತು.


ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ಹೈಕೋರ್ಟ್ ಪೀಠವು ಅರ್ಜಿಗಳನ್ನು ವಜಾಗೊಳಿಸುವಾಗ, ಹಿಜಾಬ್ ಅಭ್ಯಾಸವು ಇಸ್ಲಾಂ ಧರ್ಮದ ಅಡಿಯಲ್ಲಿ ಅತ್ಯಗತ್ಯವಾದ ಆಚರಣೆಯಲ್ಲ ಮತ್ತು ಭಾರತದ ಸಂವಿಧಾನದ 25 ನೇ ಪರಿಚ್ಛೇದದ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಹೇಳಿತ್ತು.

- Advertisement -


ಬಳಿಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಾರ್ಚ್ ನಲ್ಲಿ ಸುಪ್ರೀಂ ಕೋರ್ಟ್ ಗೆ ವಿವಿಧ ಅರ್ಜಿಗಳನ್ನು ಸಲ್ಲಿಸಲಾಗಿತ್ತು.

Join Whatsapp
Exit mobile version