Home ಟಾಪ್ ಸುದ್ದಿಗಳು ಹಿಜಾಬ್ ಪ್ರಕರಣ : ಸಿಂಧೂರ, ಕುಂಕುಮ ಧರಿಸಿ ಬಂದ ವಿದ್ಯಾರ್ಥಿಗಳನ್ನು ತಡೆದರೆ ಕಠಿಣ ಕ್ರಮ; ಬಿ...

ಹಿಜಾಬ್ ಪ್ರಕರಣ : ಸಿಂಧೂರ, ಕುಂಕುಮ ಧರಿಸಿ ಬಂದ ವಿದ್ಯಾರ್ಥಿಗಳನ್ನು ತಡೆದರೆ ಕಠಿಣ ಕ್ರಮ; ಬಿ ಸಿ ನಾಗೇಶ್

ಬೆಂಗಳೂರು : ಹಿಂದೂ ಧರ್ಮದ ಪ್ರತೀಕವಾದ ಸಿಂಧೂರ, ಕುಂಕುಮ ಬಗ್ಗೆ ಪ್ರಶ್ನೆ ಬೇಡ. ಅದು ನಮ್ಮ ಸಂಸ್ಕೃತಿಯ ಪ್ರತೀಕ, ಅದಕ್ಕೂ ಹಿಜಾಬ್ ಗೂ ಸಂಬಂಧವಿಲ್ಲ, ಅದನ್ನು ಧರಿಸಿ ಬಂದವರನ್ನು ಶಾಲೆ-ಕಾಲೇಜುಗಳಲ್ಲಿ ತಡೆದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಳೆ, ಬಿಂದಿ,ಸಿಂಧೂರ, ಕುಂಕುಮಗಳು ಅಲಂಕಾರಿಕ ವಸ್ತುಗಳು, ಅವುಗಳಿಗೆ ನಿರ್ಬಂಧ ಹಾಕಲು ಸಾಧ್ಯವಿಲ್ಲ. ಅದನ್ನು ಧರಿಸಿ ಬಂದವರನ್ನು ತಡೆದರೆ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದೇನೆ ಎಂದು ಹೇಳಿದರು.

ಹಿಜಾಬ್ ಧರ್ಮವನ್ನು ಸೂಚಿಸಿದರೆ ಬಳೆ, ಕುಂಕುಮ, ಬಿಂದಿ, ಸಿಂಧೂರ ಅಲಂಕಾರವನ್ನು ಸೂಚಿಸುತ್ತದೆ. ಅಲಂಕಾರಿಕ ವಸ್ತುಗಳನ್ನು ಧರಿಸಿಕೊಂಡು ಬನ್ನಿ ಎಂದು ನಾವು ವಿದ್ಯಾರ್ಥಿಗಳಿಗೆ ಕಡ್ಡಾಯ ಮಾಡಿಲ್ಲ. ಸ್ವ ಇಚ್ಛೆಯಿಂದ ಹಾಕಿಕೊಂಡು ಬರುತ್ತಾರೆ ಎಂದರು.

Join Whatsapp
Exit mobile version