ಹಿಜಾಬ್ ಪ್ರಕರಣ: ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

Prasthutha|

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಶಿರವಸ್ತ್ರ ನಿಷೇಧವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯನ್ನು ಮುಂದಿನ ವಾರ  ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಇಂದು ಒಪ್ಪಿಕೊಂಡಿದೆ.

- Advertisement -

ವಕೀಲ ಪ್ರಶಾಂತ್ ಭೂಷಣ್ ಅವರು ತುರ್ತು ಪಟ್ಟಿಗಾಗಿ ಭಾರತದ ಮುಖ್ಯ ನ್ಯಾಯಾಧೀಶರ ಮುಂದೆ ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿದರು. ಇವು ಕರ್ನಾಟಕದ ಹಿಜಾಬ್ ವಿಷಯಗಳಾಗಿವೆ. ಇವನ್ನು ಇನ್ನೂ ಪಟ್ಟಿ ಮಾಡಲಾಗಿಲ್ಲ. ಮಾರ್ಚ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ವಿದ್ಯಾರ್ಥಿಗಳು ಇದರಿಂದ ತುಂಬಾ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು  ಭೂಷಣ್ ಹೇಳಿದ್ದಾರೆ.

ಎರಡು ಬೆಂಚುಗಳು ಕಾರ್ಯನಿರ್ವಹಿಸುತ್ತಿಲ್ಲ. ಆದ್ದರಿಂದ ನಾವು ಮರು-ವಿತರಣೆ ಮಾಡಬೇಕಾಯಿತು. ಸ್ವಲ್ಪ ಸಮಯ ನೋಡೋಣ.  ಮುಂದಿನ ವಾರ ಸೂಕ್ತ ಪೀಠದ ಮುಂದೆ  ಪಟ್ಟಿ ಮಾಡಿ ಎಂದು ಸಿಜೆಐ ರಮಣ ಉತ್ತರಿಸಿದ್ದಾರೆ.

- Advertisement -

ಮುಸ್ಲಿಂ ವಿದ್ಯಾರ್ಥಿನಿಯರ ಮೂಲಭೂತ ಹಕ್ಕುಗಳಾದ ಶಿರವಸ್ತ್ರ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿಲುವೇನು ಎಂಬುವುದು ಮುಂದಿನ ವಾರ ಸ್ಪಷ್ಟವಾಗಲಿದೆ.

Join Whatsapp