“ಹಿಜಾಬ್ ಪ್ರಕರಣ”, “ದಿ ಕಾಶ್ಮೀರ್ ಫೈಲ್ಸ್”ನಿಂದ ಕನ್ನಡಿಗರ ಮನಸ್ಸು ಬದಲಾವಣೆ ಅಸಾಧ್ಯ: ಸಿದ್ದರಾಮಯ್ಯ

Prasthutha|

ಹುಬ್ಬಳ್ಳಿ: ಹಿಂದುತ್ವ ಹಾಗೂ ಭಾವನಾತ್ಮಕ ವಿಷಯ ಇಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಬಿಜೆಪಿ ಎಂದಿಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದಿಲ್ಲ ಎಂದು ವಿಧಾನಸಭೆ ವಿರೋಧಪಕ್ಷದ  ನಾಯಕ ಸಿದ್ದರಾಮಯ್ಯ ಹೇಳಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ವಿಷಯಗಳ ಆಧಾರದ ಮೇಲೆ ಜನರು ಚುನಾವಣೆಯಲ್ಲಿ ಮತ ಹಾಕುತ್ತಾರೆ. ಬಿಜೆಪಿಯವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಭ್ರಮೆಯಲ್ಲಿದ್ದಾರೆ. ಹಿಜಾಬ್ ಪ್ರಕರಣ ಹಾಗೂ ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರದಿಂದ ಕರ್ನಾಟಕದ ಜನರ‌ ಮನಸ್ಸು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿಯಲ್ಲಿ ಹತ್ತಾರು ಬಣಗಳಿವೆ. ನಮ್ಮ ಪಕ್ಷದಲ್ಲಿ ಬಣವಿಲ್ಲ.  ನೂರಕ್ಕೆ ನೂರು ನಾವೇ ಅಧಿಕಾರಕ್ಕೆ ಬರುತ್ತೇವೆ. ಕಾಂಗ್ರೆಸ್ ಚುನಾವಣೆ ಎದುರಿಸಲು ಸಿದ್ಧವಾಗಿದೆ. ಪಕ್ಷದ ಸಿಡಬ್ಲ್ಯುಸಿ ಸಭೆಯಲ್ಲಿ ಸೋನಿಯಾ ಗಾಂಧಿಯವರೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೆಂದು ಎಲ್ಲರೂ ಒಪ್ಪಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

- Advertisement -

ನೈತಿಕ ಶಿಕ್ಷಣದ ಜೊತೆಗೆ  ಗುಣಮಟ್ಟದ ಶಿಕ್ಷಣವನ್ನೂ ನೀಡಬೇಕು. ಸಂವಿಧಾನ ವಿರೋಧಿಯಾಗಿ ಏನನ್ನು ಮಾಡಬಾರದು ಎಂದು ಹೇಳಿದರು .

Join Whatsapp