Home ಕರಾವಳಿ ಉಪ್ಪಿನಂಗಡಿ: ಹಿಜಾಬ್ ವಿದ್ಯಾರ್ಥಿನಿಯರಿಗೆ 1 ವಾರ ತರಗತಿ ಪ್ರವೇಶ ನಿರ್ಬಂಧ

ಉಪ್ಪಿನಂಗಡಿ: ಹಿಜಾಬ್ ವಿದ್ಯಾರ್ಥಿನಿಯರಿಗೆ 1 ವಾರ ತರಗತಿ ಪ್ರವೇಶ ನಿರ್ಬಂಧ

ಉಪ್ಪಿನಂಗಡಿ: ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿದ 24 ವಿದ್ಯಾರ್ಥಿನಿಯರಿಗೆ ಒಂದು ವಾರದ ಕಾಲ ತರಗತಿಗೆ ನಿರ್ಬಂಧ ವಿಧಿಸಲಾಗಿದೆ.

 ಮಂಗಳೂರು ವಿಶ್ವವಿದ್ಯಾಲಯದ ಜಂಟಿ ನಿರ್ದೇಶಕಿ ಸೋಮವಾರ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಅಹವಾಲು ಆಲಿಸಿದರು. ತರಗತಿಗೆ ಹಾಜರಾಗಿ ಕಲಿಕಾ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಹೇಳಿದರು. ಆದರೆ  ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ಕೇಳಿದರು. ಇದಕ್ಕೆ ಆಡಳಿತ ಮಂಡಳಿ ಒಪ್ಪದ ಕಾರಣ ಪ್ರಾಂಶುಪಾಲ ಶೇಖರ್ ಅವರು ಉಪನ್ಯಾಸಕರ ಸಭೆ ಕರೆದಿದ್ದರು. ರಾಜ್ಯ ಉಚ್ಛ ನ್ಯಾಯಾಲಯದ ತೀರ್ಪು, ಸರ್ಕಾರದ ಸುತ್ತೋಲೆ, ಕಾಲೇಜು ಅಭಿವೃದ್ಧಿ ಸಮಿತಿ ಕೈಗೊಂಡ ನಿರ್ಣಯದ ಆಧಾರದಲ್ಲಿ ಸಮವಸ್ತ್ರ ನಿಯಮಾವಳಿಯನ್ನು ಉಲ್ಲಂಘಿಸುತ್ತಾ ಕಾಲೇಜಿನ ಕಲಿಕಾ ವಾತಾವರಣವನ್ನು ಹಾನಿಗೊಳಿಸುತ್ತಿರುವ 24 ವಿದ್ಯಾರ್ಥಿನಿಯರಿಗೆ ಮುಂದಿನ ಒಂದು ವಾರದ ಕಾಲ ತರಗತಿಗೆ ನಿರ್ಬಂಧ ವಿಧಿಸುವ ನಿರ್ಣಯವನ್ನು ಸಭೆಯಲ್ಲಿ ಕೈಗೊಂಡರು.

Join Whatsapp
Exit mobile version