ಕುಂದಾಪುರ: ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜ್ ಗೇಟ್ ಬಳಿಯೇ ತಡೆ : ತರಗತಿಗೆ ಹಾಜರಾಗಲು ಮನವಿ ಮಾಡಿದರೂ ಅವಕಾಶ ನೀಡದ ಪ್ರಿನ್ಸಿಪಾಲ್ !

Prasthutha|

ಕುಂದಾಪುರ: ಕಾಲೇಜಿಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಕಾಲೇಜಿನ ಗೇಟ್ ಬಳಿ ತಡೆದು ಪ್ರವೇಶ ನಿರಾಕರಿಸಿದ ಘಟನೆ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ನಡೆದಿದೆ.

- Advertisement -

ಹಿಜಾಬ್‌ಗೆ ಪ್ರತಿಯಾಗಿ ಕೆಲವು ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಕರೆದ ಸಭೆಯಲ್ಲಿ ವಸ್ತ್ರ ಸಂಹಿತೆ ಪಾಲಿಸುವಂತೆ ಮತ್ತು ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರ್ಬಂಧ ವಿಧಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

ಬುಧವಾರ ಕೆಲವು ವಿದ್ಯಾರ್ಥಿಗಳು ಕೇಸರಿ  ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ಹಿನ್ನೆಲೆ ವಿವಾದ ಉಂಟಾಗಿತ್ತು. ಬಳಿಕ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ನೇತೃತ್ವದಲ್ಲಿ ಕರೆದ ಸಭೆಯಲ್ಲಿ ವಸ್ತ್ರ ಸಂಹಿತೆ ಪಾಲಿಸುವಂತೆ ಮತ್ತು ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರ್ಬಂಧ ವಿಧಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು.

- Advertisement -

ಆದರೆ ಇಂದು ಬೆಳಗ್ಗೆ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಗೇಟ್ ಬಳಿ ತಡೆದಿದ್ದಾರೆ. ನಮಗೆ ಕಾಲೇಜಿಗೆ ಬರಲು ಅನುಮತಿ ನೀಡಿ. ನಮಗೆ ಕಲಿಕೆಯೂ ಬೇಕು, ಹಿಜಾಬ್ ಕೂಡ ಬೇಕು ಎಂದು ವಿದ್ಯಾರ್ಥಿನಿಯರು ಪ್ರಾಂಶುಪಾಲರಲ್ಲಿ ಮನವಿ ಮಾಡಿದ್ದಾರೆ.

ಆದರೆ ಪ್ರಾಂಶುಪಾಲರು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಕಾಲೇಜಿನ ಆವರಣದೊಳಗೆ ಬರಲು ಅನುಮತಿ ನೀಡದೆ ಗೇಟು ಹಾಕಿದರು. ಅಲ್ಲದೆ ಕಾಲೇಜಿನ ಬಳಿ ಬಿಗಿ  ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Join Whatsapp