ಹಿಜಾಬ್’ಗಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳ ವೈಯಕ್ತಿಕ ಮಾಹಿತಿ ಸೋರಿಕೆ; ಉಡುಪಿ SPಗೆ ದೂರು ಸಲ್ಲಿಸಿದ ಪೋಷಕರು

Prasthutha|

ಬೆಂಗಳೂರು: ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವ ಹಕ್ಕನ್ನು ಮುಂದುವರಿಸುವಂತೆ ಕೋರಿ ಕಾನೂನು ಹೋರಾಟ ನಡೆಸುತ್ತಿರುವ ಉಡುಪಿ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆಯಾಗಿರುವ ಸಂಬಂಧ, ಸಂತ್ರಸ್ತೆ ವಿದ್ಯಾರ್ಥಿನಿಯೊಬ್ಬರ ಪೋಷಕರು ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

- Advertisement -
https://twitter.com/dpkBopanna/status/1492132298015522816?t=zigbdEc7lG5MctfJRQppGw&s=19

ತಮ್ಮ ಮಕ್ಕಳ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್‌ ಅವರಿಗೆ ದೂರು ಸಲ್ಲಿಸಿರುವ ಪೋಷಕರು, ಮೊಬೈಲ್ ಸಂಖ್ಯೆ ಸೇರಿದಂತೆ ಬಾಲಕಿಯರ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿದ್ದಾರೆ. ಈ ವಿವರಗಳನ್ನು ಬಳಸಿಕೊಂಡು ದುಷ್ಕರ್ಮಿಗಳು ಬಾಲಕಿಯರಿಗೆ ಬೆದರಿಕೆ ಹಾಕಬಹುದು ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಬಾಲಕಿಯರ ಪೋಷಕರು ತಮಗೆ ಲಿಖಿತ ದೂರು ಸಲ್ಲಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ಹೇಳಿದ್ದಾರೆ. ಸೂಕ್ತ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕೇಳಲಾಗಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳನ್ನು ಕಾಲೇಜಿನ ಮೂಲಗಳು ಬಹಿರಂಗಪಡಿಸಿವೆ. ಹೀಗಾಗಿ ವಿದ್ಯಾರ್ಥಿನಿಯರು ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ದೇಶದ ಖ್ಯಾತ ಸುದ್ದಿ ಮಾಧ್ಯಮ ‘ದಿ ಕ್ವಿಂಟ್’ ವರದಿ ಮಾಡಿತ್ತು.

Join Whatsapp