Home ಟಾಪ್ ಸುದ್ದಿಗಳು ಹಿಜಾಬ್ ವಿಚಾರ: ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕಲ್ವಾ?: ಸಿದ್ದರಾಮಯ್ಯ

ಹಿಜಾಬ್ ವಿಚಾರ: ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕಲ್ವಾ?: ಸಿದ್ದರಾಮಯ್ಯ

ಮೈಸೂರು: ಸ್ವಾಮೀಜಿಗಳು ಕೂಡಾ ತಲೆ ಮೇಲೆ ಬಟ್ಟೆ ಹಾಕಲ್ವ, ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ಬಟ್ಟೆ ಹಾಕ್ಕೊಳ್ಲಿ ಬಿಡಿ. ಅದರಿಂದ ನಿಮಗೇನು ತೊಂದರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ  ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮುಸ್ಲಿಂ ಹೆಣ್ಣುಮಕ್ಕಳು ಸಮವಸ್ತ್ರದ ಬಣ್ಣದ ದುಪ್ಪಟ್ಟಾ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಕೇಳುತ್ತಿದ್ದಾರೆ. ಅದರಲ್ಲಿ ತಪ್ಪೇನಿದೆ?’. ‘ರಾಜ್ಯದಲ್ಲಿ ಹಿಜಾಬ್‌ ವಿವಾದ ಹುಟ್ಟುಹಾಕಿದ್ದೇ ಬಿಜೆಪಿಯವರು. ಎರಡೂ ಧರ್ಮದವರನ್ನು ಕರೆದು ಚರ್ಚಿಸಿ ವಿವಾದಕ್ಕೆ ತೆರೆ ಎಳೆಯಬಹುದಿತ್ತು. ಆದರೆ ಉದ್ದೇಶಪೂರ್ವಕವಾಗಿ ದೊಡ್ಡದಾಗಿಸಿದ್ದಾರೆ’ ಎಂದು ದೂರಿದರು.

Join Whatsapp
Exit mobile version