ತರಗತಿಗಳಲ್ಲಿ ಮಾತ್ರವಲ್ಲ, ಕ್ಯಾಂಪಸ್ ನಲ್ಲೂ ಹಿಜಾಬ್ ಗೆ ಅವಕಾಶವಿಲ್ಲ: ಮಂಗಳೂರು ವಿವಿ ಪ್ರಾಂಶುಪಾಲೆ ಅನುಸೂಯ ರೈ

Prasthutha|

ಮಂಗಳೂರು: ತರಗತಿಗಳಲ್ಲಿ ಮಾತ್ರವಲ್ಲ, ಕ್ಯಾಂಪಸ್ ನಲ್ಲೂ ಹಿಜಾಬ್ ಗೆ ಅವಕಾಶವಿಲ್ಲ ಎಂದು ಮಂಗಳೂರು ವಿವಿ ಪ್ರಾಂಶುಪಾಲೆ ಅನುಸೂಯ ರೈ ಸ್ಪಷ್ಟಪಡಿಸಿದ್ದಾರೆ.

- Advertisement -


ನಮ್ಮ ಕಾಲೇಜಿನಲ್ಲಿ 44 ಜನ ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ವಿವಾದ ಒಂದು ತಂಡದಿಂದಷ್ಟೇ ಆಗಿದೆ. 15 ಮಂದಿ ವಿದ್ಯಾರ್ಥಿಗಳಷ್ಟೇ ಹಿಜಾಬ್ ಕುರಿತು ಮಾತನಾಡುತ್ತಿದ್ದಾರೆ. ನಿನ್ನೆ ಅವರು ಬಂದಾಗ ನಾವೇ ಅವರನ್ನು ಹಿಜಾಬ್ ತೆಗೆದು ಬನ್ನಿ ಎಂದು ಕಳಿಸಿದ್ದೇವೆ. ಹಾಗಾಗಿ ಅವರು ನಿನ್ನೆ ಡಿಸಿ ಕಚೇರಿಗೆ ಹೋಗಿದ್ದರು. ಆ 15 ಮಂದಿ ಇವತ್ತು ತರಗತಿಗೆ ಬಂದಿಲ್ಲ ಎಂದು ಹೇಳಿದರು.
ಕೆಲ ವಿದ್ಯಾರ್ಥಿಗಳು ಹೈ ಕೋರ್ಟ್ ತೀರ್ಪಿನ ಬಳಿಕ ಕಾಲೇಜಿಗೆ ಬಂದಿಲ್ಲ.

ಒಂದು ಮೂರ್ನಾಲ್ಕು ವಿದ್ಯಾರ್ಥಿಗಳು ಟಿಸಿ ತೆಗೆದುಕೊಂಡು ಹೋಗಿದ್ದಾರೆ. ಆದರೆ ಇದು ಎಲ್ಲಾ ವಿದ್ಯಾರ್ಥಿಗಳ ಸಮಸ್ಯೆ ಅಲ್ಲ, 15 ವಿದ್ಯಾರ್ಥಿಗಳ ಸಮಸ್ಯೆ ಅಷ್ಡೇ ಎಂದರು.
ಕೆಲ ವಿದ್ಯಾರ್ಥಿಗಳಿಗೆ ಪೋಷಕರ ಮನವೊಲಿಸಲು ನಮಗೆ ಸಮಯ ಬೇಕು. ಅವರು ನ್ಯಾಯಾಲಯದ ಆದೇಶ ಆಡಳಿತ ಮಂಡಳಿಯಿಂದ ನಿಯಮವನ್ನು ಪಾಲಿಸಲೇ ಬೇಕು. ಆಡಳಿತ ಮಂಡಳಿ ಆದೇಶ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಅನೇಕ ಶಾಸಕರು ಕರೆ ಮಾಡಿದ್ದಾರೆ ನನಗೆ ಯಾರು ಒತ್ತಡ ಹಾಕಿಲ್ಲ. ಕೇವಲ ನಮ್ಮ ಆದೇಶದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಪ್ರಾಂಶುಪಾಲರಾದ ಅನುಸೂಯ ರೈ ತಿಳಿಸಿದ್ದಾರೆ.

Join Whatsapp