Home ಟಾಪ್ ಸುದ್ದಿಗಳು ಹಿಜಾಬ್ ನಿಷೇಧ: ಹೈಕೋರ್ಟ್ ತ್ರಿ ಸದಸ್ಯ ಪೀಠದಿಂದ ವಿಚಾರಣೆ ಆರಂಭ

ಹಿಜಾಬ್ ನಿಷೇಧ: ಹೈಕೋರ್ಟ್ ತ್ರಿ ಸದಸ್ಯ ಪೀಠದಿಂದ ವಿಚಾರಣೆ ಆರಂಭ

ಬೆಂಗಳೂರು: ಮುಸ್ಲಿಮ್ ವಿದ್ಯಾರ್ಥಿನಿಯರು ಧರಿಸುತ್ತಿದ್ದ ಹಿಜಾಬ್ ಮೇಲೆ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ಪೀಠವು ಆರಂಭಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಸಂಜಯ್ ಹೆಗಡೆ ವಾದ ಮಂಡಿಸಿ, ಕಳೆದ ವರ್ಷದ ಸೆಪ್ಟೆಂಬರ್ನಿಂದ ಅರ್ಜಿದಾರರು ತಾರತಮ್ಯ ಅನುಭವಿಸುತ್ತಿದ್ದಾರೆ. ಅವರಿಗೆ ಹಾಜರಾತಿ ನೀಡದೇ ತರಗತಿಯಿಂದ ಹೊರಗೆ ಕೂರುವಂತೆ ಮಾಡಲಾಗಿದೆ. ಸಮಯಕ್ಕೆ ಸರಿಯಾಗಿ ಈ ಸಣ್ಣ ಪ್ರಕರಣವನ್ನು ನಿಯಂತ್ರಿಸುವ ಬದಲು ಅದನ್ನು ನಿಯಂತ್ರಣ ತಪ್ಪಲು ಬಿಡಲಾಗಿದೆ ಎಂದು ಹೇಳಿದರು.

Join Whatsapp
Exit mobile version