Home ಟಾಪ್ ಸುದ್ದಿಗಳು ಹಿಜಾಬ್ ತೀರ್ಪು ಸ್ವಾಗತಾರ್ಹ: ರಾಷ್ಟ್ರೀಯ ಮಹಿಳಾ ಆಯೋಗ

ಹಿಜಾಬ್ ತೀರ್ಪು ಸ್ವಾಗತಾರ್ಹ: ರಾಷ್ಟ್ರೀಯ ಮಹಿಳಾ ಆಯೋಗ

ನವದೆಹಲಿ: ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್ ನ ತೀರ್ಪು ಸ್ವಾಗತಾರ್ಹ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಹೇಳಿದ್ದಾರೆ.

ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ತಮ್ಮ ಇಚ್ಛೆಗೆ ಅನುಗುಣವಾಗಿ ಉಡುಪುಗಳನ್ನು ಧರಿಸುವ ಹಕ್ಕಿದೆ. ಅವರ ಸ್ವಾತಂತ್ರ್ಯಕ್ಕೆ ಯಾವುದೇ ಧಕ್ಕೆ ಇಲ್ಲ. ಆದರೆ, ತರಗತಿಗಳಲ್ಲಿ ವಿದ್ಯಾರ್ಥಿನಿಯರು ಆಡಳಿತ ಮಂಡಳಿಗಳು ಜಾರಿಗೊಳಿಸಿರುವ ವಸ್ತ್ರ ಸಂಹಿತೆಯನ್ನು ಅನುಸರಿಸಬೇಕು ಎಂದಿದ್ದಾರೆ.

ರಾಜ್ಯ ಹೈಕೋರ್ಟ್ ತೀರ್ಪು, ಸದ್ಯ ನಡೆಯುತ್ತಿರುವ ಹಿಜಾಬ್ ವಿವಾದಗಳಿಗೆ ತೆರೆ ಎಳೆಯಲಿದೆ ಮತ್ತು ಹೆಣ್ಣುಮಕ್ಕಳು ಶಿಕ್ಷಣ ಮುಂದುವರಿಸಲು ಅನುವು ಮಾಡಿಕೊಡಲಿದೆ ಎಂದು ರೇಖಾ ಶರ್ಮಾ ಹೇಳಿದ್ದಾರೆ.

Join Whatsapp
Exit mobile version