‘ಹಿಜಾಬ್ ನನ್ನ ಹಕ್ಕು’: ರಾಷ್ಟ್ರಮಟ್ಟದಲ್ಲಿ ನಂ.1 ಟ್ರೆಂಡಿಂಗ್ !

Prasthutha|

ಉಡುಪಿ: ಹಿಜಾಬ್ ಧರಿಸಿದ ಕಾರಣಕ್ಕಾಗಿ ಉಡುಪಿಯಲ್ಲಿ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ನಿರಾಕರಿಸಲಾಗುತ್ತಿರುವ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಪ್ರಮುಖ ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್’ನಲ್ಲಿ #HijabisOurRight #UdupiStudentsNeedJustice ಎಂಬ ಹ್ಯಾಶ್’ಟ್ಯಾಗ್ ಭಾರತದಲ್ಲೇ ನಂ.1 ಟ್ರೆಂಡಿಂಗ್’ನಲ್ಲಿದೆ.

- Advertisement -

ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿಯ ಎಂಟು ಮಂದಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿದ ಕಾರಣಕ್ಕಾಗಿ ಕಳೆದ ಐದು ದಿನಗಳಿಂದ ತರಗತಿ ಪ್ರವೇಶ ನಿರಾಕರಿಸಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಈ ವಿದ್ಯಾರ್ಥಿನಿಯರು ಕಾಲೇಜಿನ ಹೊರಗಡೆ ನಿಲ್ಲುತ್ತಿದ್ದಾರೆ. ನ್ಯಾಯ ಸಿಗುವವರೆಗೆ ಹೋರಾಟ ನಡೆಸುವುದಾಗಿ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ವಿದ್ಯಾರ್ಥಿನಿಯರ ಹೋರಾಟಕ್ಕೆ ಇದೀಗ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಸಂವಿಧಾನದ 9 ಹಾಗೂ 21ನೇ ವಿಧಿಯನ್ನು ಗಾಳಿಗೆ ತೂರಿ, ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯನ್ನುಂಟುಮಾಡಿದ ಕಾಲೇಜು ಪ್ರಾಂಶುಪಾಲರು ಹಾಗೂ ಆಡಳಿತ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು , ಹಿಜಾಬ್ ಹಾಕಿದ ಕಾರಣಕ್ಕಾಗಿ ತರಗತಿಯಿಂದ ಹೊರದಬ್ಬಿದ ವಿದ್ಯಾರ್ಥಿಗಳನ್ನು ತರಗತಿಗೆ ಸೇರಿಸಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

- Advertisement -

ಹಿಜಾಬ್ ಧರಿಸಲು ಅವಕಾಶವಿಲ್ಲ: ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ನಿರ್ಣಯ

ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಶಾಸಕ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿ ಹಾಜರಾಗಲು ಅವಕಾಶ ನೀಡದಿರುವ ಕುರಿತು ನಿರ್ಣಯಿಸಲಾಗಿದೆ ಎಂದು ತಿಳಿದುಬಂದಿದೆ

Join Whatsapp