ರಾಜೀನಾಮೆ ನೀಡುವುದಾಗಿ ಘೋಷಿಸಿದ ಹಿಮಾಚಲ ಸಿಎಂ

Prasthutha|

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ಸಜ್ಜಾಗಿದ್ದು, ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ಜನಾದೇಶವನ್ನು ಗೌರವಿಸಿ ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಹಸ್ತಾಂತರಿಸುವುದಾಗಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾದೇಶವನ್ನು ನಾನು ಗೌರವಿಸುತ್ತೇನೆ. ಇನ್ನು ಕೆಲವೇ ದಿನಗಳಲ್ಲಿ ನಾನು ನನ್ನ ರಾಜೀನಾಮೆಯನ್ನು ರಾಜ್ಯಪಾಲರಿಗೆ ಹಸ್ತಾಂತರಿಸಲಿದ್ದೇನೆ ಎಂದು ತಿಳಿಸಿದರು.

- Advertisement -

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಬಿಜೆಪಿಗಿಂತ 13 ಸ್ಥಾನಗಳಲ್ಲಿ ಮುಂದಿದ್ದು,  39 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮಧ್ಯೆ , ಬಿಜೆಪಿ ಸೋಲನ್ನು ಒಪ್ಪಿಕೊಂಡಿದೆ.

- Advertisement -