ಹಿಮಾಚಲ ಪ್ರದೇಶ | ಮಳೆಗೆ 74 ಮಂದಿ ಮೃತ್ಯು: 10 ಸಾವಿರ ಕೋಟಿ ನಷ್ಟ

Prasthutha|

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಾವಿನ ಸಂಖ್ಯೆ 74ಕ್ಕೆ ಏರಿಕೆಯಾಗಿದ್ದು, ಸುಮಾರು 10 ಸಾವಿರ ಕೋಟಿ ನಷ್ಟವಾಗಿದೆ.

ಈ ಮಾನ್ಸೂನ್ನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮೂಲಸೌಕರ್ಯಗಳನ್ನು ಮರುನಿರ್ಮಾಣ ಮಾಡಲು ಒಂದು ವರ್ಷ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.

- Advertisement -

ಮಳೆಯಿಂದ ಅಲ್ಲಲ್ಲಿ ಭೂಕುಸಿತ ಉಂಟಾಗುತ್ತಿದೆ. ಸಮ್ಮರ್ ಹಿಲ್ ನಲ್ಲಿರುವ ಶಿವ ದೇವಾಲಯದಲ್ಲಿ ಭೂಕುಸಿತ ಹಾಗೂ ಶಿಮ್ಲಾದಲ್ಲಿ ಸಂಭವಿಸಿದ ಮೂರು ಭೂಕುಸಿತಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ.

Join Whatsapp